ಶೀಘ್ರದಲ್ಲೇ ಆರಂಭವಾಗಲಿದೆ ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಪ್ರಕ್ರಿಯೆ

ಬೆಂಗಳೂರು,ಜು.29- ನಕಲಿ ಮತದಾನಕ್ಕೆ ಕಡಿವಾಣ ಹಾಕಲು ಗಂಭೀರ ಚಿಂತನೆ ನಡೆಸಿರುವ ಚುನಾವಣಾ ಆಯೋಗ ಶೀಘ್ರದಲ್ಲೇ ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ. ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿದರೆ, ಎರಡು-ಮೂರು ಕಡೆ ಮತದಾನ ಮಾಡುತ್ತಿದ್ದ ನಕಲಿ ಮತದಾರರ ಪತ್ತೆ ಮಾಡಬಹುದಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸಾಲು ಸಾಲು ಚುನಾವಣೆಗಳು ಎದುರಾಗುತ್ತಿರುವ ಸಂದರ್ಭದಲ್ಲೇ ಚುನಾವಣಾ ಆಯೋಗ ಮತದಾರರ ಗುರುತಿನ ಚೀಟಿಗೆ […]