ಮಂಗಳೂರು ಆಟೋ ಸ್ಫೋಟ : ಶಕಿತನನ್ನು ವಶಕ್ಕೆ ಪಡೆದ ಪೊಲೀಸ್

ಬೆಂಗಳೂರು,ನ.20- ಮಂಗಳೂರಿನ ಗರೋಡಿ ಬಳಿ ನಡೆದಿರುವ ಆಟೋದಲ್ಲಿ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಒಬ್ಬನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸ್ಫೋಟಕವನ್ನು ಬ್ಯಾಗ್‍ನಲ್ಲಿಟ್ಟುಕೊಂಡು ಮಂಗಳೂರಿನ ಜನನಿಬಿಡ ಪ್ರದೇಶವೊಂದರಲ್ಲಿ ಅದನ್ನು ಸ್ಪೋಟಿಸಲು ಸಂಚು ರೂಪಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅದು ಆಟೋದಲ್ಲಿ ಸ್ಫೋಟಗೊಂಡಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ದುರಂತ ನಡೆದಿಲ್ಲವಾದರೂ ಕರಾವಳಿಯಲ್ಲಿ ಮತ್ತೆ ಉಗ್ರರ ಕರಿನೆರಳು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ. ಈಗಾಗಲೇ ಆಟೋದಲ್ಲಿ ಪ್ರಯತ್ನಿಸುತ್ತಿದ್ದವನನ್ನು ಪ್ರೇಮ್‍ಕುಮಾರ್ ಕನೋಗಿ ಎಂದು ಗುರುತಿಸಲಾಗಿದೆ. […]

ಕಾಂಗ್ರೆಸ್‍ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ: ಬಿಎಸ್‌ವೈ

ಶಿವಮೊಗ್ಗ,ನ.18- ಮತದಾರರ ಖಾಸಗಿ ಡೇಟಾವನ್ನು ಕಲೆ ಹಾಕಲಾಗಿದೆ ಎಂಬ ಪ್ರತಿಪಕ್ಷ ಕಾಂಗ್ರೆಸ್‍ನವರ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೋಲುವ ಹತಾಶೆಯಿಂದ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಆಧಾರವಿಲ್ಲದೆ ಮಾತನಾಡುವವರ ಬಗ್ಗೆ ಚರ್ಚೆ ಮಾಡುವುದೇ ಅಪ್ರಸ್ತುತ ಎಂದು ಹೇಳಿದರು. ಸೋಲುವ ಭೀತಿಯಿಂದ ಕಾಂಗ್ರೆಸ್ ಜನರ ಗಮನವನ್ನು ಬೇರೆಡೆ ಸೆಳೆಯಲು ಸುಳ್ಳು ಹೇಳುತ್ತಿದ್ದಾರೆ. ದಾಖಲೆಗಳಿದ್ದರೆ ಅವರು ಸಂಬಂಧಪಟ್ಟವರಿಗೆ ದೂರು ನೀಡಲಿ. ತನಿಖೆ ನಡೆದ ನಂತರ ಸತ್ಯಾಂಶ ಗೊತ್ತಾಗುತ್ತದೆ. ಅಲ್ಲಿಯ […]

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ದುಬಾರಿ ಮೌಲ್ಯದ ದತ್ತಾಂಶ ಕಳವು ಶಂಕೆ

ಬೆಂಗಳೂರು, ನ.17- ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಪಟ್ಟ ಹಗರಣ ಬೆಳಕಿಗೆ ಬರುತ್ತಿದ್ದಂತೆ ಬಿಬಿಎಂಪಿ ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾಗಿದೆ. ಚಿಲುಮೆ ಸಂಸ್ಥೆ ಚುನಾವಣಾ ಆಯೋಗ, ಸರ್ಕಾರ ಅಥವಾ ಬಿಬಿಎಂಪಿಯಿಂದ ಯಾವುದೇ ಆರ್ಥಿಕ ನೆರವು ಪಡೆಯದೇ ಮತದಾರರ ಜಾಗೃತಿ ಮೂಡಿಸುವುದಾಗಿ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದಾಗಿ ಪ್ರಸ್ತಾವನೆ ಸಲ್ಲಿಸಿದೆ. ಬಿಬಿಎಂಪಿ ಅದಕ್ಕೆ ಅನುಮತಿಯನ್ನು ನೀಡಿದೆ. 2019ರಿಂದಲೂ ಆಯೋಗ ಈ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ. ಆದರೆ ಚುನಾವಣಾ ಆಯೋಗ ಇಂದು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಬಿಬಿಎಂಪಿ ಜಿಲ್ಲಾ ಚುನಾವಣಾಕಾರಿ […]

ವೋಟರ್ ಡೇಟಾ ಹಗರಣ : ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು

ಬೆಂಗಳೂರು,ನ.17- ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹಿ ಮಾಡಿರುವ ದೂರಿನ ಪ್ರತಿ ಯನ್ನು ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ರೆಡ್ಡಿ ಅವರಿಗೆ ನೀಡಲಾಗಿದೆ. ಡಿ.ಕೆ.ಶಿವಕುಮಾರ್, ಸಿದ್ಧ ರಾಮಯ್ಯ, ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ನಾಯಕರ ನಿಯೋಗ ನಗರ ಪೊಲೀಸ್ ಆಯುಕ್ತರ ಕಚೇರಿಗೆ […]