ಸೋಮಣ್ಣರವರನ್ನು ಕಡೆಗಣಿಸಿಲ್ಲ : ಯಡಿಯೂರಪ್ಪ

ಬೆಂಗಳೂರು,ಮಾ.16- ವಸತಿ ಸಚಿವ ವಿ.ಸೋಮಣ್ಣ ಅವರನ್ನು ಎಂದೂ ಕಡೆಗಣಿಸಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಕೂತು ಪರಿಹರಿಸಿ ಕೊಳ್ಳಲಾಗುವುದು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಗೆ ವರಿಷ್ಠರು ಸೋಮಣ್ಣನವರನ್ನು ಕರೆದು ಮಾತನಾಡಿದ್ದಾರೆ, ಎಲ್ಲವೂ ಸರಿಹೋಗುತ್ತದೆ,ಯಾವುದೇ ರೀತಿಯಲ್ಲಿ ಗೊಂದಲವಿಲ್ಲ. ಸೋಮಣ್ಣ ಅವರನ್ನು ನಾನು ಭೇಟಿ ಮಾಡದೆ ಮೂರು ತಿಂಗಳಾಯಿತು. ಯಾರು ಯಾರನ್ನೂ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ನಮ್ಮಲ್ಲಿ ಯಾವುದೇ ಅಸಮಾಧಾನ […]

ಎಲ್ಲಾ ಗೊಂದಲಗಳು ಬಗೆಹರಿದಿವೆ : ವಿ.ಸೋಮಣ್ಣ

ಬೆಂಗಳೂರು,ಮಾ.16- ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಅಸಮಾಧಾನಗಳನ್ನು ನಮ್ಮ ದೆಹಲಿ ನಾಯಕರು ಸರಿಪಡಿಸಿದ್ದಾರೆ. ಇನ್ನು ಯಾವ ಸಮಸ್ಯೆ ಇಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಕೆಲವು ಬೆಳವಣಿಗೆಗಳ ಬಗ್ಗೆ ಅವರ ಗಮನಕ್ಕೆ ತಂದಿದ್ದೇನೆ. ಅವರು ಕೂಡ ಪರಿಹರಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಎಲ್ಲಾ ಗೊಂದಲಗಳು ಬಗೆಹರಿದಿವೆ. ನಮ್ಮೊಳಗಿನ ಆಂತರಿಕ ಕಲಹಗಳಿಗೆ ತೆರೆ ಎಳೆದು ಪಕ್ಷ ಕಟ್ಟುವಂತೆ ಸೂಚಿಸಿದ್ದಾರೆ ಎಂದು ಹೇಳಿದರು.ಮಾಜಿ […]