ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೂರ್ಯ ಸಿಡಿದೇಳಬೇಕಿತ್ತು: ಜಾಫರ್

ನವದೆಹಲಿ,ನ.15- ಈ ಬಾರಿಯ ಟಿ-20 ವಿಶ್ವಕಪ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಗಮನ ಸೆಳೆದರೂ ಪ್ರಮುಖ ಪಂದ್ಯಗಳಲ್ಲಿ ಅವರ ಬ್ಯಾಟ್‍ನಿಂದ ರನ್ ಹರಿದುಬರಲಿಲ್ಲ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವಾಸೀಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ತಂಡಕ್ಕೆ ನಿರ್ಣಾಯಕ ಪಂದ್ಯಗಳಾಗಿದ್ದ ಪಾಕಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಬ್ಬರಿಸಲಿಲ್ಲ ಹಾಗಂತ ಅವರ ಸಾಧನೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಜಾಫರ್ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಭಾರತ ಆಡಿದ ಆರು […]