ರಾಜ್ಯದಲ್ಲಿ ವಾಟರ್ ಏರೋಡ್ರೋಮ್ ಅಭಿವೃದ್ಧಿಗೆ ನಿರ್ಧಾರ : ಸಚಿವ ಸೋಮಣ್ಣ

ಬೆಂಗಳೂರು, ಜು 13: ನಾಗರಿಕ ವಿಮಾನ ಯಾನ ಸಂಪರ್ಕದ ಮೂಲಕ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಜತೆಗೆ ಆರ್ಥಿಕ ಪುನಶ್ಚೇತನದ ಉದ್ದೇಶದಿಂದ 9 ಕಡೆ ವಾಟರ್ ಏರೋಡ್ರೋಮ್ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ ‘ಕರ್ನಾಟಕದ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಣೆ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ತುಂಗಭದ್ರಾ, ಕೆಆರ್‌ಎಸ್‌, ಲಿಂಗನಮಕ್ಕಿ, ಆಲಮಟ್ಟಿ […]