3.8 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕದ ಗುರಿ
ನವದೆಹಲಿ,ಫೆ.1- ಪ್ರಸಕ್ತ ವರ್ಷ 3.8 ಕೋಟಿ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲು 60ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.ಹರ್‍ಗರ್ ನಳ್ ಸೇಜಲ್ ಯೋಜನೆಯಡಿ 8.7 ಕೋಟಿ ಸಂಪರ್ಕಗಳನ್ನು ಕಲ್ಪಿಸಲಾಗಿದೆ. ಇದರಿಂದ 5.5 ಕೋಟಿ ಮನೆಗಳಿಗೆ ಕಳೆದ ಎರಡು ವರ್ಷಗಳಿಂದ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಹೇಳಿದರು. ದೇಶದ ಎಲ್ಲರಿಗೂ ಮನೆ ನಿರ್ಮಿಸಿಕೊಡುವ ಸಂಕಲ್ಪವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಹೊಂದಿದ್ದು, 2022-23ನೇ ಸಾಲಿನಲ್ಲಿ 80 ಲಕ್ಷ ಮನೆ ನಿರ್ಮಾಣವನ್ನು ಪೂರ್ಣಗೊಳಿಸಲಾಗುತ್ತದೆ. […]