ನವದೆಹಲಿಯಲ್ಲಿ ಮಾಸ್ಕ್ ಕಡ್ಡಾಯ

ನವದೆಹಲಿ, ಆ.11- ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾರ್ವಜನಿಕರು ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಇಡೀ ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಳಿತ ಕಾಣುತ್ತಿದ್ದು, ದೆಹಲಿಯಲ್ಲಿ ಮಾತ್ರ ಅದರ ಸಂಖ್ಯೆ ಮಿತಿಮೀರುತ್ತಿದೆ. ಸಾವಿರ ಸಂಖ್ಯೆಗೂ ಹೆಚ್ಚುತ್ತಿರುವ ಕಾರಣ ತುರ್ತು ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ಮನೆಯಿಂದ ಹೊರ ಬರಬೇಕಾದರೆ ಜನರು ಮಾಸ್ಕ್ ಧರಿಸುವುದನ್ನು ಮತ್ತೆ ಕಡ್ಡಾಯಗೊಳಿಸಲಾಗುತ್ತಿದೆ. ಪೊಲೀಸರು ಈಗಾಗಲೇ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಅಭಿಯಾನವನ್ನು ಆರಂಭಿಸಿದ್ದಾರೆ. ಆದರೆ ಯಾವುದೇ ದಂಡವನ್ನು ವಿಧಿಸುತ್ತಿಲ್ಲ. […]