ಯುಗಾದಿಗೂ ಮುನ್ನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು,ಮಾ.14- ತಾಪಮಾನ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಚದುರಿದಂತೆ ಕೆಲವೆಡೆ ಇನ್ನೊಂದು ವಾರ ಬೇಸಿಗೆ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಯುಗಾದಿ ಹಬ್ಬದವರೆಗೂ ಮಳೆಯಾಗುವ ಮುನ್ಸೂಚನೆಗಳು ಕಂಡುಬಂದಿವೆ. ರಾಜ್ಯದಲ್ಲಿ 5 ಮಿ.ಮೀನಿಂದ 15 ಮಿ.ಮೀವರೆಗೆ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. ಮಾ.16ರಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ […]

ವಿಚಾರಣೆಗೆ ಕಾಲವಕಾಶ ಕೋರಿದ ಮನೀಷ್ ಸಿಸೋಡಿಯಾ

ನವದೆಹಲಿ,ಫೆ.19 – ನಗರಾಡಳಿತದ ಬಜೆಟ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಕಾಲವಕಾಶ ನೀಡುವಂತೆ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಿಬಿಐಗೆ ಮನವಿ ಮಾಡಿದ್ದಾರೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆಸಿರುವ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ 3 ತಿಂಗಳ ಹಿಂದೆ ಚಾರ್ಜ್‍ಶೀಟ್ ಸಲ್ಲಿಸಿತ್ತು. ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು. ಆದರೆ ಎರಡು ವಾರಗಳ ಬಳಿಕ ಹಾಜರಾಗಲು ಅವಕಾಶ ನೀಡುವಂತೆ ಸಿಸೋಡಿಯಾ ಸಿಬಿಐಗೆ ಮನವಿ ಮಾಡಿದ್ದಾರೆ. ಕೋಟಿ […]