ವೀಕೆಂಡ್ ಕರ್ಫ್ಯೂಗೆ ಕೌಂಟ್‍ಡೌನ್, ಏನಿರುತ್ತೆ ಏನಿರಲ್ಲ..?

ಬೆಂಗಳೂರು,ಜ.7 – ರಾಜ್ಯದಲ್ಲಿ ಕೊರೋನಾ ವೈರಸ್, ಓಮಿಕ್ರಾನ್ ದಿನೇದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದಲ್ಲಿ ವೀಕೆಂಡ್ ಕಫ್ರ್ಯೂ ಹೇರಿಕೆಯಾಗಿದ್ದು ಇಂದು ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಅನ್ವಯವಾಗುತ್ತದೆ. ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಅತ್ಯವಶ್ಯಕ ಮತ್ತು ತುರ್ತು ಕಾರ್ಯಗಳನ್ನು ಹೊರತುಪಡಿಸಿ ಜನರ ಒಡಾಟವನ್ನು ಕಟ್ಟುನಿಟ್ಟಾಗಿ ನಿಷೇಸಲು ಜಿಲ್ಲಾಡಳಿತಗಳು ಕ್ರಮ ಕೈಗೊಂಡಿವೆ. ತುರ್ತು, ಅತ್ಯವಶ್ಯಕ ಸೇವೆಗಳು ಮತ್ತು ಕೋವಿಡ್ ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ […]