ಸಿಎಂ ಉದ್ದವ್ ಠಾಕ್ರೆಗೆ ವಾರ್ನಿಂಗ್ ಕೊಟ್ಟ ಅಣ್ಣಾ ಹಜಾರೆ

ಮುಂಬೈ,ಫೆ.6- ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‍ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿಷ್ಟಾವ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಸಾಮಾಜಿಕ ಕಾರ್ಯಕರ್ತರ ಅಣ್ಣಾ ಹಜಾರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್‍ ರ್ಮಾರ್ಕೆಟ್ ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಈ ನಿರ್ಧಾರವು ರಾಜ್ಯದ ದುರದೃಷ್ಟಕರ ಮತ್ತು ಮುಂದಿನ ಪೀಳಿಗೆಗೆ ಅಪಾಯಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. […]