ಸಂವಿಧಾನ ಧಾರ್ಮಿಕ ಪುಸ್ತಕ ಎಂಬಂತೆ ನಾವು ನಡೆದುಕೊಳ್ಳುತ್ತಿದ್ದೇವೆ : ಕೇಂದ್ರ ಸಚಿವ

ಕುರುಕ್ಷೇತ್ರ,ಡಿ.27- ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ನ್ಯಾಯಾಲಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜೂಜು ಹೇಳಿದ್ದಾರೆ. ಹರಿಯಾಣದಲ್ಲಿನ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ನಡೆದ ಮೂರು ದಿನಗಳ ಭಾರತೀಯ ಅವಕಾತ್ ಪರಿಷತ್‍ನ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ವಿವಿಧ ನ್ಯಾಯಾಲಯಗಳಲ್ಲಿ 5 ಕೋಟಿಗೂ ಹೆಚ್ಚಿನ ಪ್ರಕರಣಗಳು ಬಾಕಿ ಉಳಿದಿವೆ. ಕೋವಿಡ್ ವೇಳೆಯಲ್ಲೂ ನ್ಯಾಯಾಲಯಗಳ ಕಾರ್ಯಾಚರಣೆಗೆ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ಪ್ರಸ್ತುತ ಹಲವು ರಾಜಕೀಯ ಪಕ್ಷಗಳು, […]