ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 40 ಲಕ್ಷ ರೂ. ಬಿಡುಗಡೆ

ಬೆಂಗಳೂರು, ಮಾ.28- ರಾಜ್ಯ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದ್ದಂತೆ ರಾಮನಗರದ ರಾಮಗಿರಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಚಾಲನೆ ನೀಡಿದೆ. ಇದಕ್ಕಾಗಿ ಆರಂಭಿಕವಾಗಿ 40 ಲಕ್ಷ ರೂ.ಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಮನಗರ ಜಿಲ್ಲೆಯ ಜನತೆಗೆ ಇದು ರಾಮನವಮಿಯ ಉಡುಗೊರೆ ಆಗಿದೆ. ಒಂದೆರೆಡು ವರ್ಷಗಳಲ್ಲಿ ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿ ಆಗಲಿದ್ದು,ಇದು ದಕ್ಷಿಣ ಭಾರತದ ಅಯೋಧ್ಯೆಯಾಗಲಿದೆ ಎಂದಿದ್ದಾರೆ. “ಕ್ಷಮೆ ಕೇಳದಿರುವುದು ಗಾಂಧಿ […]

ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ ಸಾಧ್ಯತೆ

ನ್ಯೂಯಾರ್ಕ್,ಮಾ. 19- ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮನ್ನು ಬಂಧಿಸುವ ಸಂಚು ನಡೆದಿದೆ ಎಂದು ಹೇಳಿಕೊಂಡಿದ್ದು, ಒಂದು ವೇಳೆ ಅಂತಹ ಕ್ರಮಗಳಾದರೆ ದೇಶಾದ್ಯಂತ ರಿಪಬ್ಲಿಕ್ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದ್ದಾರೆ. ಈ ನಡುವೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಮತ್ತೊಬ್ಬ ಅಭ್ಯರ್ಥಿ ಭಾರತೀಯ ಮೂಲದ ರಾಮಸ್ವಾಮಿ ಟ್ರಂಪ್‍ಗೆ ಬೆಂಬಲ ಸೂಚಿಸಿದ್ದಾರೆ. ತಮ್ಮ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಪ್ರಕಟಿಸಿರುವ ಟ್ರಂಪ್, ಮಂಗಳವಾರ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ. ಅಮಿತ್ ಶಾ ಭೇಟಿ ಮಾಡಿದ ರಮೇಶ […]

ಮತ್ತೆ ಪರಮಾಣು ಬೆದರಿಕೆ ಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ, ಫೆ 27- ಅಮೆರಿಕ ಪರಮಾಣು ಶಸ್ತ್ರಾಸ್ತ್ರ ಸಾಮಥ್ರ್ಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ನಮ್ಮ ದೇಶವನ್ನು ಸಂರಕ್ಷಿಸಲು, ಭದ್ರತೆ ಮತ್ತು ಕಾರ್ಯತಂತ್ರದ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಂದರ್ಶನದಲ್ಲಿ ಪುಟಿನ್ ಹೇಳಿದ್ದಾರೆ. ರಷ್ಯಾವನ್ನು ಪರಮಾಣು ಶಸ್ತ್ರಾಸ್ತ್ರ ಗಳಿಂದ ಹಣೆಯಲು ನ್ಯಾಟೋ ಅಮೆರಿಕವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದಿನ ಪರಿಸ್ಥಿತಿಗಳಲ್ಲಿ, ಎಲ್ಲಾ ಪ್ರಮುಖ ನ್ಯಾಟೋ ದೇಶಗಳು ನಮ್ಮ ಮೇಲೆ ಕಾರ್ಯತಂತ್ರದ ಸೋಲನ್ನು ಉಂಟು ಮಾಡಲು ,ನಮ್ಮ ದೇಶದ ಜನರನ್ನು ಬಳಲುವಂತೆ […]