ಹೈಟೆನ್ಷನ್ ತಂತಿ ತಗುಲಿ ಗಾಯಗೊಂಡಿದ್ದ ಬಾಲಕ ಸಾವು

ಬೆಂಗಳೂರು, ಡಿ.4- ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ತಂತಿ ತಾಗಿ ಇಬ್ಬರು ಬಾಲಕರು ತೀವ್ರವಾಗಿ ಗಾಯಗೊಂಡಿದ್ದು, ಒಬ್ಬ ಬಾಲಕ ಇಂದು ಮುಂಜಾನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಳೆದ ಗುರುವಾರ ಸಂಜೆ ನಂದಿನಿ ಲೇಔಟ್‍ನ ವಿಜಯಾನಂದ ನಗರದಲ್ಲಿ ಪಾರಿವಾಳ ಹಿಡಿಯಲು ಹೋದಾಗ ವಿದ್ಯುತ್ ಪ್ರಹರಿಸಿ ಗಾಯಗೊಂಡಿದ್ದಸುಪ್ರೀತ್(11) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈತನ ಜೊತೆ ಇದ್ದ ಮತ್ತೊಬ್ಬ ಬಾಲಕ ಚಂದನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಂದು ಈ ಇಬ್ಬರು ಬಾಲಕರು ಮನೆಯ ಮಹಡಿಯ ಮೇಲೆ ಹೋಗಲು ಪ್ರಯತ್ನಿಸಿದ್ದರು. […]