ಜೆಎನ್‍ಯು ಹಲ್ಲೆ ಖಂಡಿಸಿ ಪ್ರತಿಭಟಿಸಿದವರ ಮೇಲಿನ ಪ್ರಕರಣ ರದ್ದು

ಮುಂಬೈ,ಜ.30- ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಗೇಟ್ವೆ ಆಫ್ ಇಂಡಿಯಾದಲ್ಲಿ ಪ್ರತಿಭಟನೆ ನಡೆಸಿದ್ದ 36 ಜನರ ವಿರುದ್ಧದ ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಸ್ಥಳೀಯ ನ್ಯಾಯಾಲಯ ಅನುಮತಿಸಿದೆ. ಆರೋಪಿಗಳು ಯಾವುದೇ ವೈಯಕ್ತಿಕ ಹಿತಾಸಕ್ತಿ ಅಥವಾ ಪ್ರಯೋಜನಗಳಿಲ್ಲದೆ ಆಪಾದಿತ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಎಸ್‍ಪ್ಲಾನೆಡ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ವಿ.ದಿನೋಕರ್ ಪ್ರಕರಣಗಳನ್ನು ಹಿಂಪಡೆಯಲು ಅನುಮತಿಸಿದ್ದಾರೆ. ಜನವರಿಯಲ್ಲಿ ಹೊರಡಿಸಲಾದ ಆದೇಶ ತಡವಾಗಿ ಬೆಳಕಿಗೆ ಬಂದಿದೆ. ಬಿಜೆಪಿಗೆ […]
ಚಿಲುಮೆ ಅಕ್ರಮ ಪ್ರಕರಣ : ಇಬ್ಬರು IAS ಅಧಿಕಾರಿಗಳ ಅಮಾನತು ವಾಪಸ್

ಬೆಂಗಳೂರು,ಡಿ.24-ಚಿಲುಮೆ ಸಂಸ್ಥೆಯ ಮತದಾರರ ಪಟ್ಟಿ ಅಕ್ರಮ ಪ್ರಕರಣದ ನಂತರ ಸೇವೆಯಿಂದ ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರ ಅಮಾನತು ವಾಪಸ್ ಪಡೆದು ಇಬ್ಬರಿಗೂ ಸ್ಥಳ ನಿಯೋಜನೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಶನ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಶನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ. ಚಿಲುಮೆ […]
ಬ್ರೇಕಿಂಗ್ : ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ ಪರಿಷ್ಕೃತ ವಿದ್ಯುತ್ ದರ ವಾಪಸ್.?
ಬೆಂಗಳೂರು,ಅ.3- ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಪರಿಷ್ಕರಣೆ ಮಾಡಿದ್ದ ವಿದ್ಯುತ್ ದರವನ್ನು ಹಿಂಪಡೆಯಲು ತೀರ್ಮಾನಿಸಿದೆ. ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಸರ್ಕಾರ ಪರಿಷ್ಕøತ ದರವನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂಧನ ಸಚಿವ ಸುನೀಲ್‍ಕುಮಾರ್ ಅವರು ಚರ್ಚಿಸಿ ಪರಿಷ್ಕøತ ದರವನ್ನು ಕೈಬಿಡಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಈ […]