ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಹಿಂಪಡೆಯುವ ಸಾಧ್ಯತೆ..!

ಬೆಂಗಳೂರು,ಜ.18- ಕೋವಿಡ್ ಸೋಂಕು ಮತ್ತು ಓಮಿಕ್ರಾನ್‍ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಸಿರುವ ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ ಕರ್ಫ್ಯೂ ಹಿಂಪಡೆಯುವುದು ಬಹುತೇಕ ಖಚಿತವಾಗಿದೆ. ಶುಕ್ರವಾರ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸಿ ಸರ್ಕಾರದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಪ್ರಸ್ತುತ ಜಾರಿಯಲ್ಲಿರುವ ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ 10ರಿಂದ ಮುಂಜಾನೆ 5ರವರೆಗೆ ಎಲ್ಲಾ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಕರ್ಫ್ಯೂವನ್ನು ಸಹ ತೆಗೆದು […]