ನನ್ನ ಮೇಲೆ ದಾಳಿ ಮಾಡಿದಷ್ಟು ಪ್ರಶ್ನೆ ಮಾಡುತ್ತೇನೆ, ಹೆದರುವ ಮಾತೇ ಇಲ್ಲ : ರಾಹುಲ್

ನವದೆಹಲಿ, ಆ.5- ಶತಮಾನಗಳಿಂದ ಇಟ್ಟಿಗೆ ಮೇಲೆ ಇಟ್ಟಿಗೆ ಇಟ್ಟು, ಕಟ್ಟಿದ ಭಾರತ ನಮ್ಮ ಕಣ್ಣ ಮುಂದೆಯೇ ನಾಶವಾಗುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ, ನಾಲ್ಕು ಮಂದಿಯ ಸರ್ವಾಧಿಕಾರಿ ಆಡಳಿತದಿಂದ ನರಳುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದರು. ಇಂದು ಬೆಳಗ್ಗೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಕಾಂಗ್ರೆಸ್ ಶುಕ್ರವಾರ ದೇಶಾದ್ಯಂತ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು. […]