ಮತ್ತೊಂದು ಜೀವವನ್ನು ಬಲಿಪಡೆದ ಬೆಂಗಳೂರಿನ ರಸ್ತೆಗುಂಡಿಗಳು..!

ಬೆಂಗಳೂರು,ಜ.30- ನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಮತ್ತೊಮ್ಮೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಟ್ಟಿಗೆಪಾಳ್ಯದ ಶರ್ಮಿಳಾ (38) ಮಾಗಡಿ ಮುಖ್ಯರಸ್ತೆ ಅಂಜನಾನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತು ತಾವರೆಕೆರೆ ಕಡೆಗೆ ಮಹಿಳೆ ತೆರಳುತ್ತಿದ್ದರು. ಕಾವೇರಿ ನೀರಿನ ಪೈಪ್‍ಲೈನ್ ಅಳವಡಿಕೆಗಾಗಿ ಮಾಗಡಿ ಮುಖ್ಯರಸ್ತೆಯ ಅಂಜನಾನಗರದಿಂದ ದೊಡ್ಡ ಗೊಲ್ಲರಹಟ್ಟಿಯವರೆಗೆ ರಸ್ತೆಯನ್ನು ಅಗೆದು ಮುಚ್ಚದೆ ಹಾಗೇ ಬಿಡಲಾಗಿದೆ. ಇಲ್ಲಿನ ಹರಿಹರ ಪುತ್ರ ಅಯ್ಯಪ್ಪಸ್ವಾಮಿ ದೇವಸ್ಥಾನದ ಸಮೀಪ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ […]