ಸಿಬಿಐ, ಇಡಿ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ : ಶಾ

ನವದೆಹಲಿ,ಮಾ.18- ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಪ್ರಕರಣಗಳು ಯುಪಿಎ ಸರ್ಕಾರದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾನ್‍ಕ್ಲೇವ್‍ನಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ತನಿಖಾ ಸಂಸ್ಥೆಗಳು ಏನೇ ಮಾಡಿದರೂ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಮುಂದಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ. ಸಿಬಿಐ ಮತ್ತು ಇಡಿ […]

ಕೆಲಸ ಮಾಡದೇ ಬಿಲ್ ಕೊಡುವುದು ಕಾಂಗ್ರೆಸ್ ಚಾಳಿ

ಕೊಪ್ಪಳ, ಮಾ.14- ಕೆಲಸ ಮಾಡದೇ ಬಿಲ್ ಕೊಡುವುದು ಕಾಂಗ್ರೆಸ್ ಚಾಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗುಂದಿಯಲ್ಲಿ ಕಾಮಗಾರಿಗೆ 125 ಕೋಟಿ ಮಂಜೂರು ಮಾಡಿದ್ದು ಬಿಡುಗಡೆಯಾಗಿಲ್ಲ ಎಂದು ವಿರೋಧ ಪಕ್ಷದವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕೆಲಸ ಹೇಗೆ ನಡೆಯುತ್ತದೆ ಎಂಬ ಕಲ್ಪನೆ ಇರಬೇಕು. ಅನುಮೋದನೆಯಾಗಿ ಸರ್ಕಾರಿ ಆದೇಶವಾಗಿ ಟೆಂಡರ್ ಪ್ರಕ್ರಿಯೆ ಆಗಿ ಕಾಮಗಾರಿ ಮುಗಿದ ನಂತರ ಬಿಲ್ ಕೊಡುತ್ತಾರೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿಯ ಆಪ್ತರೆನ್ನಲಾದ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಲಾಗುವುದಿಲ್ಲ. ಹೇಳಿಕೆ […]

ಒಂದೇ ಮತದಿಂದ ಗೆದ್ದು ಇತಿಹಾಸ ಬರೆದಿದ್ದ ಧ್ರುವನಾರಾಯಣ್

ಬೆಂಗಳೂರು,ಮಾ.11- ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಕೆ.ಧ್ರುವನಾರಾಯಣ್ ಅವರು 2004ರ ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಮತದಿಂದ ಗೆದ್ದು ಇತಿಹಾಸ ಬರೆದಿದ್ದರು. ಭಾರತದ ಇತಿಹಾಸದಲ್ಲೇ ಗ್ರಾಮಪಂಚಾಯ್ತಿ ಚುನಾವಣೆಯಿಂದ ಹಿಡಿದು ಲೋಕಸಭೆ ಚುನಾವಣೆವರೆಗೂ ಒಂದೇ ಮತದಿಂದ ಗೆದ್ದು ಇತಿಹಾಸ ಬರೆದಿರುವ ದಾಖಲೆ ಅವರ ಹೆಸರಿನಲ್ಲೇ ಇದೆ. ಚಾಮರಾಜನಗರ ಜಿಲ್ಲೆ ಸಂತೆಮಾರನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಆರ್.ಕೆ.ಧ್ರುವನಾರಾಯಣ, ಬಿಜೆಪಿ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಒಂದು ಮತದಿಂದ ಪರಾಭವಗೊಳಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಕೆಪಿಸಿಸಿ […]

ಕೆಪಿಸಿಸಿ ಕಾರ್ಯಧ್ಯಕ್ಷ ಆರ್. ಧೃವ ನಾರಾಯಣ್ ನಿಧನ

ಮೈಸೂರು: ಕೆಪಿಸಿಸಿ ಕಾರ್ಯಧ್ಯಕ್ಷ ಆರ್. ಧೃವ ನಾರಾಯಣ್ ಅವರು ಶನಿವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರಾತ್ರಿ ಅವರು ಮನೆಗೆ ಆಗಮಿಸಿದ್ದರು. ಮಧ್ಯರಾತ್ರಿ ಇದಕ್ಕಿದಂತೆ ತೀವ್ರತರನಾದ ಎದೆ ನೋವು ಕಾಣಿಸಿಕೊಂಡಿತ್ತು, ತಕ್ಷಣ ಅವರನ್ನು ಮೈಸೂರಿನ ಒಂಟಿಕೊಪ್ಪಲ್ಲಿನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ 5.30ರ ವೇಳೆ ಕೊನೆಯುಸಿರೆಳೆದಿದ್ದಾರೆ. ಧ್ರುವನಾರಾಯಣ್ ಅವರಿಗೆ ಈಗಿನ್ನು 61 ವರ್ಷಗಳು. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಾಧ್ಯಕ್ಷರಾಗಿ ಸದಾ ಚಟುವಟಿಕೆಯಿಂದ ಕೆಲಸ ನಿರ್ವಹಿಸುತ್ತಿದ್ದರು. ಧ್ರುವನಾರಾಯಣ್ […]

ಭಾರತ ಸೇರಿ 6 ರಾಷ್ಟ್ರಗಳ ವೀಸಾ ಸರಳೀಕರಣಕ್ಕೆ ಮುಂದಾದ ರಷ್ಯಾ

ಮಾಸ್ಕೋ,ಮಾ.6- ಭಾರತ ಸೇರಿದಂತೆ ಆರು ದೇಶಗಳ ವೀಸಾ ಕಾರ್ಯ ವಿಧಾನಗಳನ್ನು ಸರಾಗಗೊಳಿಸುವ ಪ್ರಕ್ರಿಯೆಗೆ ರಷ್ಯಾ ಚಾಲನೆ ನೀಡಿದೆ. ಭಾರತ, ಸಿರಿಯಾ, ಇಂಡೋನೆಷ್ಯಾ, ಅಂಗೋಲಾ, ವಿಯೆಟ್ನಾಂ ಮತ್ತು ಫಲಿಫೈನ್ ರಾಷ್ಟ್ರಗಳ ನಾಗರೀಕರಿಗೆ ಅನುಕೂಲವಾಗುವಂತೆ ವೀಸಾ ಸರಳೀಕರಣಕ್ಕೆ ಚಾಲನೆ ನೀಡಲಾಗಿದೆ ಎಂದು ರಷ್ಯಾ ಉಪ ವಿದೇಶಾಂಗ ಸಚಿವ ಎವ್ಗೆನಿ ಇವಾನೋವ್ ತಿಳಿಸಿದ್ದಾರೆ. ಸೌದಿ ಅರೇಬಿಯಾ, ಬಾರ್ಬಡೋಸ್, ಹೈಟಿ, ಜಾಂಬಿಯಾ, ಕುವೈತ್, ಮಲೇಷ್ಯಾ, ಮೆಕ್ಸಿಕೊ ಮತ್ತು ಟ್ರಿನಿಡಾಡ್ ಸೇರಿದಂತೆ 11 ದೇಶಗಳೊಂದಿಗೆ ವೀಸಾ ಮುಕ್ತ ಪ್ರವಾಸಗಳ ಕುರಿತು ರಷ್ಯಾ ಅಂತರ್‍ ಸರ್ಕಾರಿ […]

KUWJ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು,ನ.18- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿ ಹಾಗೂ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ ತಿಳಿಸಿದ್ದಾರೆ.ಪ್ರಶಸ್ತಿ ವಿವರಗಳು: ಷರತ್ತುಗಳು :ಪ್ರಶಸ್ತಿಗೆ 2020 ಜನವರಿ 1 ರಿಂದ 2020 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು. ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ ವರದಿ/ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು […]

ಬಿಜೆಪಿ ಸೇರಿದ ಹಿಮಾಚಲ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ

ನವದೆಹಲಿ, ಸೆ 28- ಹಿಮಾಚಲ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹರ್ಷ್ ಮಹಾಜನ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಳೆದ ವರ್ಷ ನಿಧನರಾದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ನಿಕಟವರ್ತಿಯಾಗಿದ್ದ ಮಹಾಜನ್ ಮಾಜಿ ಸಚಿವರು ಆಗಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ದೆಹಲಿಯಲ್ಲಿರುವಂತೆ ಮಾ- ಬೇಟಾ ಹಿಡಿತ ಹೆಚ್ಚಾಗಿದೆ. ವಿರೋಧ ಪಕ್ಷವು ದೃಷ್ಟಿಹೀನ, ದಿಕ್ಕಿಲ್ಲದ ನಾಯಕತ್ವದ ಪಕ್ಷವಾಗಿದೆ ಎಂದು ಕಿಡಿಕಾರಿದ್ದಾರೆ. ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. […]

ವೀಸಾಗಳಿಗಾಗಿ ಕಾಯುವ ಸಮಯ ಕಡಿಮೆ ಮಾಡಲು ಕ್ರಮ : ಕೆನಡಾದ ಹೈಕಮಿಷನ್

ನವದೆಹಲಿ ಆ.19 – ವೀಸಾಗಳಿಗಾಗಿ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ದೀರ್ಘಾವಧಿ ಕಾಯುವ ಸಮಯ ಕಡಿತಗೊಳಿಸಿ ಪರಿಸ್ಥಿತಿಯನ್ನು ಸುಧಾರಿಸಲು ಕ್ರಮ ಕೃಗೊಳ್ಳಲಾಗುತ್ತಿದೆ ಎಂದು ಕೆನಡಾ ಹೈಕಮಿಷನ್ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಕೆನಡಾದ ಹೈ ಕಮಿಷನ್, ಸರಣಿ ಟ್ವೀಟ್ ಮಾಡಿದ್ದು ಪ್ರತಿ ವಾರ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ತಮ್ಮ ವೀಸಾಗಳನ್ನು ಪಡೆಯುತ್ತಿದ್ದಾರೆ ಮತ್ತು ಕಾಯುವ ಸಮಯವನ್ನು ಕಡಿಮೆ ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುಲಾಗುತ್ತದೆ ಎಂದು ಹೇಳಿದೆ. ನಿಮ್ಮ ಹತಾಶೆ ಮತ್ತು ನಿರಾಶೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು […]