ವಿಶ್ವ ಡೇರಿ ಶೃಂಗಸಭೆಗೆ ಕೆಎಂಎಫ್‌ ಪ್ರಾಯೋಜಕತ್ವ

ಬೆಂಗಳೂರು, ಆ.4- ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ನ ವಿಶ್ವ ಡೇರಿ ಶೃಂಗಸಭೆಯ ಮುಖ್ಯ ಪ್ರಾಯೋಜಕತ್ವದಲ್ಲಿ ಒಂದಾದ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) 48 ವರ್ಷ ಗಳ ನಂತರ ಇದೇ ಮೊದಲ ಬಾರಿಗೆ ಸೆ.12 ರಿಂದ 15ರವರೆಗೂ ಗುಜರಾತ್ನ ಆನಂದ್ ನಗರದಲ್ಲಿ ಅಂತಾರಾಷ್ಟ್ರೀಯ ವಿಶ್ವ ಡೇರಿ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಅಮೂಲ್ ಜೊತೆಗೆ ಕರ್ನಾಟಕ ಹಾಲು ಮಹಾಮಂಡಳಿಯೂ ಸಹ ಮುಖ್ಯ ಪ್ರಾಯೋಜಕತ್ವ ಪಡೆದಿರುವುದು ವಿಶೇಷವಾಗಿದೆ. ಕರ್ನಾಟಕ ಹಾಲು ಮಹಾಮಂಡಳಿಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ 2ನೇ ಅತಿದೊಡ್ಡ ಸಹಕಾರಿ ಸಂಸ್ಥೆಯಾಗಿದ್ದು, […]