ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಬೇಲೂರು, ಹಳೇಬೀಡು

ಹಾಸನ, ಫೆ.3- ಈ ಬಾರಿಯ ಬಜೆಟ್ನಲ್ಲಿ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯ ನಾಮ ನಿರ್ದೇಶನ ಮಾಡಿರುವುದು ಸಂತಸ ತಂದಿದೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಲಿಂಗೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಬೇಲೂರು-ಹಳೇಬೀಡು ಸೇರಿರುವುದು ಜಿಲ್ಲಾಯ ಮಟ್ಟಿಗೆ ಅಲ್ಲದೆ ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಹಕಾರ ನೀಡಿದೆ ಅಲ್ಲದೆ ಕಲೆ ಮತ್ತು ಸಂಸ್ಕøತಿ ಉಳಿಸಿ ಬೆಳೆಸಲು ಉತ್ತೇಜನ ನೀಡಿದಂತಾಗಿದೆ […]