ನಾನಾ ದೇಶಗಳಿಂದ ವಿದೇಶಿಗರ ದಾಂಗುಡಿ, ಬೆಂಗಳೂರಲ್ಲಿ ಹೆಚ್ಚಾಯ್ತು ಕೊರೊನಾ ಆತಂಕ

ಬೆಂಗಳೂರು,ಡಿ.28- ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಸಿಲಿಕಾನ್ ಸಿಟಿಗೆ ಸಾವಿರಾರು ಪ್ರವಾಸಿಗರು ದಾಂಗುಡಿ ಇಡುತ್ತಿರುವುದರಿಂದ ನಗರದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾಲು ಸಾಲು ರಜೆ ಸಿಕ್ಕಿರುವುದರಿಂದ ಸಾವಿರಾರು ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದು, ಬಹುತೇಕ ಹೋಟೆಲ್‍ಗಳು ಪ್ರವಾಸಿಗರಿಂದ ತುಂಬಿ ಹೋಗಿದೆ. ಅನಿವಾಸಿ ಭಾರತೀಯರು ಸೇರಿದಂತೆ ದೇಶ ವಿದೇಶಗಳಲ್ಲಿರುವ ಸಾವಿರಾರು ಮಂದಿ ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಪಂಚತಾರಾ ಹೋಟೆಲ್ ಸೇರಿದಂತೆ ರಾಜ್ಯದ ಬಹುತೇಕ ಹೋಟೆಗಳಿಗೆ ಭರ್ಜರಿ ವ್ಯಾಪಾರವಾಗುತ್ತಿದೆ. ಹೋಟೆಲ್ ಬುಕ್ಕಿಂಗ್ ಜೋರಾಗಿ ನಡೆಯುತ್ತಿದ್ದು, ಹೊಸ ವರ್ಷದ ಆರಂಭದ […]