ಅ.2ರಿಂದ ಯಶಸ್ವಿನಿ ಯೋಜನೆ ಜಾರಿ
ಬೆಂಗಳೂರು, ಸೆ.13- ಸಹಕಾರ ಕ್ಷೇತ್ರಗಳಲ್ಲಿರುವವರಿಗೆ ಚಿಕಿತ್ಸೆ ನೀಡುವ ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2ರಿಂದ ಜಾರಿ ಮಾಡಲು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಅದರಂತೆ ಅನುಷ್ಠಾನಕ್ಕೆ ಬರಲಿದೆ ಎಂದು ಸಹಕಾರ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್‍ನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಹಕಾರ ಸಚಿವ ಎಚ್.ವಿಶ್ವನಾಥ್ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಈ ಯೋಜನೆ ಒಪ್ಪಿಗೆ ಇರಲಿಲ್ಲ. ಹಾಗಾಗಿ 2018ರಲ್ಲಿ ಸ್ಥಗಿತಗೊಳಿಸಿದರು.ಬದಲಿಗೆ ಆಯುಷ್ಮಾನ್ […]