ಕಾಂಗ್ರೆಸ್ 4ನೇ ಗ್ಯಾರಂಟಿ ಕುರಿತು ಯಡಿಯೂರಪ್ಪ ಲೇವಡಿ

ಬೆಂಗಳೂರು,ಮಾ.21- ಪದವೀಧರರು ಹಾಗೂ ಡಿಪ್ಲೊಮಾ ಮಾಡಿದವರಿಗೆ ಮಾಶಾಸನ ನೀಡುವ ಕಾಂಗ್ರೆಸ್ ಪಕ್ಷದ 4ನೇ ಗ್ಯಾರಂಟಿ ಘೋಷಣೆಗೆ ಯಾವುದೇ ಬೆಲೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಎಲ್ಲಿದೆ? ಯಾವ ರಾಜ್ಯದಲ್ಲಿ ಅನುಷ್ಠಾನ ಮಾಡಲಾಗಿದೆ, ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದವರೇ ಘೋಷಣೆ ಮಾಡಿದ ಯೋಜನೆಗಳು ಅನುಷ್ಠಾನಕ್ಕೆ ಬಂದಿಲ್ಲ.ಹೀಗಾಗಿ 4ನೇ ಗ್ಯಾರಂಟಿ ಯೋಜನೆಗೆ ಬೆಲೆ ಇಲ್ಲ ಎಂದು ಕುಹುಕವಾಡಿದರು. ಈ ಯೋಜನೆ ಅನುಷ್ಠಾನ ಮಾಡಲು ಸಾವಿರಾರು ಕೋಟಿ […]

ಬಿಜೆಪಿಯಲ್ಲಿ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗುತ್ತಿದೆಯೇ..?

ಬೆಂಗಳೂರು,ಡಿ.14-ಕೊಪ್ಪಳದಲ್ಲಿ ನಾಳೆ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಿಗದಿಯಾಗಿದ್ದರೂ ಈವರೆಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿಲ್ಲ.ಇದು ಬಿಜೆಪಿಯೊಳಗೆ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬುದಕ್ಕೆ ಇಂಬು ನೀಡುವಂತಿದೆ. ನಾಳೆ ಕೊಪ್ಪಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಆಗಮಿಸುತ್ತಿದ್ದು , ಏಕಕಾಲಕ್ಕೆ 10 ಕಚೇರಿಗಳು ಮತ್ತು ಮೂರು ಕಾರ್ಯಾಲಯಗಳನ್ನು ಉದ್ಘಾಟಿಸಲಿದ್ದಾರೆ.ಸಮಾರಂಭ ನಡೆಯಲು ಇನ್ನು ಕೇವಲ ಕೆಲವೇ ಗಂಟೆಗಳು ಬಾಕಿಯಿದ್ದರೂ ಯಡಿಯೂರಪ್ಪ ಅವರಿಗೆ ಆಹ್ವಾನ ಪತ್ರಿಕೆಯನ್ನೇ ಸಂಘಟಿಕರು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]