ಪ್ರಚಾರಕ್ಕಾಗಿ ಸಿದ್ದರಾಮಯ್ಯ ಗಿಮಿಕ್ ಮಾಡ್ತಿದ್ದಾರೆ : ಬಿಎಸ್ವೈ ಟಾಂಗ್

ಬೆಂಗಳೂರು, ಮಾ.23- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧೆ ಮಾಡಬೇಕೆಂಬುದು ಯಾರಲ್ಲೂ ಗೊಂದಲ ಉಂಟಾಗಿಲ್ಲ. ಇದು ಕೇವಲ ಪ್ರಚಾರ ಪಡೆಯುವ ಗಿಮಿಕ್ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ, ವರುಣ, ಕಡೂರು, ಕುಷ್ಟಗಿ ಹೀಗೆ ನಾನಾಕಡೆ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆಯೇ ಹೊರತು ಅವರ ಸ್ಪರ್ಧೆ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು. ರೋಷನ್ ಬೇಗ್ ಪುತ್ರ ರುಮಾನ್ ಬೇಗ್ ಬಿಜೆಪಿಗೆ ಸುಮ್ಮನೆ ಜನರ ಮಧ್ಯೆ […]

“ಬಿಎಸ್ವೈಗೆ ಕಣ್ಣೀರು ಹಾಕಿಸಿ ಅಧಿಕಾರ ಕಿತ್ತುಕೊಂಡು, ಈಗ ಕಾಲು ಹಿಡಿಯುತ್ತಿದ್ದಾರೆ”

ಬೆಂಗಳೂರು,ಮಾ.1- ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಕಾಲು ಹಿಡಿಯುತ್ತಿರುವ ಬಿಜೆಪಿ, ಈ ಮೊದಲು ಅದೇ ಯಡಿಯೂರಪ್ಪರ ಕಣ್ಣಲ್ಲಿ ನೀರು ಹಾಕಿಸಿ, ಅಧಿಕಾರದಿಂದ ಇಳಿಸಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷರ ಮುಖ ತೋರಿಸಿದರೆ ನಾಲ್ಕು ಮತಗಳು ಸಿಗುವುದಿಲ್ಲ ಎಂಬ ವಾಸ್ತವ ಸಂಗತಿ ಅರಿವಾಗುತ್ತಲೇ ಯಡಿಯೂರಪ್ಪ ಅವರನ್ನು ಉತ್ಸವ ಮೂರ್ತಿ ಮಾಡಲು ಬಿಜೆಪಿ ಹೊರಟ್ಟಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಇದೇ ಬಿಜೆಪಿ ಹಿಂದೆ […]

ವಿಧಾನಸಭೆಯಲ್ಲಿ ದೇವೇಗೌಡರನ್ನು ಕೊಂಡಾಡಿದ ಯಡಿಯೂರಪ್ಪ

ಬೆಂಗಳೂರು,ಫೆ.24- ಇಂತಹ ಇಳಿವಯಸ್ಸಿನಲ್ಲೂ ನಾಡಿನ ಜಲ, ನೆಲ, ಭಾಷೆ, ರೈತರ ಬಗ್ಗೆ ಚಿಂತನೆ ನಡೆಸುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿಂದು ಮುಕ್ತಕಂಠದಿಂದ ಹೊಗಳಿಸಿದರು. ವಿಧಾನಸಭೆಯಲ್ಲಿಂದು ತಮ್ಮ ಕೊನೆಯ ಭಾಷಣ ಮಾಡಿದ ಅವರು, ಸದನದಲ್ಲಿರುವ ಪ್ರತಿಯೊಬ್ಬರಿಗೂ ಅವರು ಆದರ್ಶಪ್ರಾಯರು. ಇಂಥ ವಯಸ್ಸಿನಲ್ಲೂ ಅವರು ನಾಡಿನ ಬಗ್ಗೆ ಇಟ್ಟುಕೊಂಡಿರುವ ಕಳಕಳಿ, ರೈತರ ಬಗ್ಗೆ ಚಿಂತನೆ, ಬದ್ದತೆ, ನಮಗೆ ಪ್ರೇರಣೆ ಎಂದು ಶ್ಲಾಘಿಸಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಸರ್ಕಾರಕ್ಕೆ ಸಾಕಷ್ಟು […]

ಜನರ ಒಲವು ಬಿಜೆಪಿ ಕಡೆಗಿದೆ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ : ಬಿಎಸ್ವೈ

ಬೆಂಗಳೂರು, ಫೆ.15- ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೊಟೇಲ್ನಲ್ಲಿಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದೀಜಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ, ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು. ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ […]