ಬಿಎಸ್ವೈಗೆ ಮೋದಿ ಬಹುಪರಾಕ್

ಶಿವಮೊಗ್ಗ,ಫೆ.27- ಐದು ದಶಕಗಳ ಕಾಲ ಬಡವರು ಮತ್ತು ರೈತರಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೀವನ ಮುಂದಿನ ಪೀಳಿಗೆಗೆ ಆದರ್ಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠ ದಿಂದ ಹೊಗಳಿದರು. ಇತ್ತೀಚೆಗೆ ವಿಧಾನಸಭೆಯಲ್ಲಿ ಯಡಿಯೂರಪ್ಪನವರು ಮಾಡಿದ ವಿದಾಯದ ಭಾಷಣ ಬಿಜೆಪಿಯ ಎಲ್ಲ ಕಾರ್ಯಕರ್ತರಿಗೂ ಪ್ರೇರಣೆಯಾಗಿದೆ. ಬಡವರು, ರೈತರಿಗಾಗಿ 50 ವರ್ಷ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಕರ್ನಾಟಕದಲ್ಲಿ ಈಗಲೂ ಅವರೊಬ್ಬ ಜನಪ್ರಿಯ ನಾಯಕ ಎಂದು ಬಣ್ಣಿಸಿದರು. ಯಡಿಯೂರಪ್ಪನವರಿಗೆ 80ನೇ ಹುಟ್ಟಹಬ್ಬದ ಶುಭಾಶಯ ಕೋರಿದ ಅವರು, […]
ಯಡಿಯೂರಪ್ಪನವರನ್ನ ಬಿಜೆಪಿ ಹೈಕಮಾಂಡ್ ಪಂಕ್ಚರ್ ಮಾಡಿದೆ : ಸಿದ್ದರಾಮಯ್ಯ

ಕಲಬುರಗಿ,ಫೆ.5-ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದು ಏಕೆ ಎಂದು ಬಿಜೆಪಿಯವರು ಮೊದಲು ಉತ್ತರಿಸಲಿ. ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದಾಗಲೇ ಆ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿಲ್ಲ. ಇನ್ನೂ ಈಗ ಯಡಿಯೂರಪ್ಪರನ್ನು ಮೂಲೆ ಗುಂಪು ಮಾಡಲಾಗಿದೆ, ಜನ ಈಗ ಬಿಜೆಪಿಯನ್ನು ನಂಬುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ರಥ ಪಂಚರ್ ಆಗದಿದ್ದರೆ ಸಾಕು. ಈಗಾಗಲೇ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಪಂಚರ್ ಮಾಡಿಬಿಟ್ಟಿದೆ. ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು […]
ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಬಿಎಸ್ವೈ

ಬೆಂಗಳೂರು,ಫೆ.4- ರಾಜ್ಯದಲ್ಲಿ ಈ ಬಾರಿ ಬಿಜೆಪಿ ಯಾರ ಮೇಲೆಯೂ ಅವಲಂಬಿತವಾಗದೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲಿದೆ. ಇದನ್ನು ಯಾವುದೇ ಶಕ್ತಿಗಳು ತಡೆಯಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಪ್ರತಿಯೊಬ್ಬರ ಮನೆಗೂ ತಲುಪಿದೆ ಎಂದು ತಿಳಿಸಿದರು. ನಮ್ಮ ಯೋಜನೆಗಳನ್ನು ಪ್ರತಿಯೊಬ್ಬರ ಮನೆಗೂ ತಲುಪಿಸುವ ಕೆಲಸವನ್ನು ಕಾರ್ಯಕರ್ತರು […]
ನನಗೆ ನನ್ನದೇ ಆದ ಶಕ್ತಿ ಇದೆ : ಎಚ್ಚರಿಕೆ ಸಂದೇಶ ರವಾನಿಸಿದ ಬಿಎಸ್ವೈ

ಬೆಂಗಳೂರು, ಡಿ.15- ರಾಜ್ಯದಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟು ಶ್ರಮ ಹಾಕಿದ್ದೇನೆ. ಯಾರು ಯಾರನ್ನೂ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಎಲ್ಲರಿಗೂ ಅವರದ್ದೇ ಆದ ಶಕ್ತಿ ಇದೆ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಪಕ್ಷದವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಕೊಪ್ಪಳಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ […]
ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಹೊಸಪೇಟೆ, ಅ.12- ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ಸಡಗರದ ವಾತಾವರಣ. ಅಡುಗೆ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬೆಳಗಿನ ಉಪಾಹಾರದ ತಯಾರಿಯಲ್ಲಿ ನಿರತರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟಿನ ತಯಾರಿಯಲ್ಲಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ […]