ಹುಡುಗೀರನ್ನ ಚುಡಾಯಿಸುವವರಿಗೆ ಕಮಲ್‍ಪಂತ್ ಖಡಕ್ ವಾರ್ನಿಂಗ್

ಬೆಂಗಳೂರು, ಫೆ.26- ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಎಚ್ಚರಿಸಿದ್ದಾರೆ. ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿರುವ ಆಯುಕ್ತರು, ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಾರೆ ಎಂಬ ದೂರು ಕೇಳಿಬಂದಿದೆ. ಈ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದರೆ ಹೊಯ್ಸಳ ಪೊಲೀಸರು ಕ್ಷಣಾರ್ಧದಲ್ಲಿ ಸ್ಥಳಕ್ಕೆ ಬರುತ್ತಾರೆ ಎಂದು ತಿಳಿಸಿದರು.ಅಪ್ರಾಪ್ತರು ಬೈಕ್‍ಗಳಲ್ಲಿ ವೀಲಿಂಗ್ ಮಾಡುತ್ತಿದ್ದು, ಅಪಘಾತಗಳಿಗೆ […]