ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರ ಆಕ್ಷೇಪ

ಬೆಂಗಳೂರು,ನ.25- ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರ ವೇತನದಿಂದ ಹಣ ಕಟಾವು ಮಾಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವಾಗಿದ್ದು, ಬಹಳಷ್ಟು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ನವೆಂಬರ್ ತಿಂಗಳ ವೇತನದಲ್ಲಿ ಪುಣ್ಯಕೋಟಿ ಯೋಜನೆಗಾಗಿ ಎ ವೃಂದದ ಅಧಿಕಾರಿಗಳಿಂದ 11 ಸಾವಿರ, ಬಿ ವೃಂದದ ಅಧಿಕಾರಿಗಳಿಂದ 4 ಸಾವಿರ, ಸಿ ವೃಂದದ ಅಧಿಕಾರಿಗಳಿಂದ 400 ರೂ. ವಂತಿಗೆಯನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊರಡಿಸುವ ಪ್ರಕ್ರಿಯೆಗಳು ಶರವೇಗದಲ್ಲಿ ನಿರ್ಧಾರವಾಗಿದ್ದವು. ಇತ್ತೀಚೆಗೆ ರಾಜ್ಯ ಸರ್ಕಾರ […]

31 ಗೋವುಗಳನ್ನೂ ದತ್ತು ಪಡೆದ ನಟ ಸುದೀಪ್

ಬೆಂಗಳೂರು,ನ.24- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ನಟ ಸುದೀಪ್ ಹೇಳಿದರು. ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು. ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಕ ಮಾಡಿ ನನ್ನ ಜವಾಬ್ದಾರಿ ಹೆಚ್ಚಿಸಿದೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು […]