ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಕೋವಿಡ್ ಕಡಿಮೆ

ಬೆಂಗಳೂರು,ಜ.15- ವಯಸ್ಕರಿಗೆ ಲಸಿಕೆ ನೀಡಲಾಗಿದ್ದರೂ ಮತ್ತು ಕಿರಿಯ ಮಕ್ಕಳು ಲಸಿಕೆ ಪಡೆಯಲು ಅರ್ಹರಲ್ಲದಿದ್ದರೂ, ಮೂರನೇ ಅಲೆಯಲ್ಲಿ ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಕೋವಿಡ್ ಸೋಂಕಿನಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ರಾಜ್ಯ ಕೋವಿಡ್ 19 ವಾರ್ ರೂಮ್ ವಿಶ್ಲೇಷಣೆ ಬಹಿರಂಗಪಡಿಸಿದೆ. ಲಸಿಕೆ ನೀಡದ ಕಾರಣ ಮೂರನೇ ತರಂಗ ಮಕ್ಕಳನ್ನು ಹೆಚ್ಚು ಗುರಿಯಾಗಿಸಬಹುದು ಎಂದು ಹಲವಾರು ತಜ್ಞರು ಎಚ್ಚರಿಸಿದ್ದಾರೆ. ಆದರೆ ಪ್ರಸ್ತುತ ಆರಂಭವಾಗಿರುವ ಅಲೆಯಲ್ಲಿ ವಯಸ್ಕರಿಗೆ ಹೋಲಿಸಿದರೆ ಮಕ್ಕಳು ಕಡಿಮೆ ಸೋಂಕಿಗೆ ಒಳಗಾಗಿದ್ದಾರೆ. ಮೂರನೇ ಅಲೆ ಮಕ್ಕಳಿಗಿಂತ ವಯಸ್ಕರಲ್ಲಿ ಹೆಚ್ಚು ಹರಡುತ್ತಿದೆ. […]