ಬಾಯಿಮುಚ್ಚಿಕೊಂಡು ಕೆಲಸ ಮಾಡಿ : ಡಿಕೆಶಿ ಎಚ್ಚರಿಕೆ

ಬೆಂಗಳೂರು, ಜು.23- ಎಲ್ಲಾ ನಾಯಕರು ಬಾಯಿ ಮುಚ್ಚಿಕೊಂಡು ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಸಂಘಟನೆ ಮಾಡಿ. ಮೊದಲು ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ನೀಡಿದ್ಧಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹಮ್ಮದ್ ನೀಡಿರುವ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಲೆವೆಲ್‍ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು […]