ಜಿ.ಪಂ, ತಾ.ಪಂ ಕ್ಷೇತ್ರ ಪುನರ್ ವಿಂಗಡಣೆಗೆ ಸುಗ್ರೀವಾಜ್ಞೆ

ಬೆಂಗಳೂರು,ಆ.24-ಬಹುನಿರೀಕ್ಷಿತ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಕ್ಷೇತ್ರಗಳ ಜನಸಂಖ್ಯೆ ನಿಗದಿಪಡಿಸುವ ಸಂಬಂಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಸರ್ಕಾರದ ಈ ಕ್ರಮದಿಂದಾಗಿ ಈಗಾಗಲೇ ಸಾಕಷ್ಟು ವಿಳಂಬವಾಗಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಇನ್ನಷ್ಟು ವಿಳಂಬವಾಗುವುದು ಬಹುತೇಕ ಖಚಿತವಾಗಿದೆ. ಸುಗ್ರಿವಾಜ್ಞೆಯ ಪ್ರಕಾರ ತಾ.ಪಂ. ಹಾಗೂ ಜಿ.ಪಂ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಲಿದೆ. ಇದು ಮುಂದೆ ಕ್ಷೇತ್ರ ಪುನರ್‍ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಇನ್ನಷ್ಟು […]