ಮಾ.23 ರಂದು ‘ವಿವೇಕಾನಂದ ಯುವಶಕ್ತಿ ಸಂಘ’ ಯೋಜನೆಗೆ ಚಾಲನೆ

ಬೆಂಗಳೂರು, ಮಾ.19- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆಗೆ ಮಾ.23 ರಂದು ಚಾಲನೆ ನೀಡಲಿದ್ದಾರೆ. ಈ ಕುರಿತು ಇಂದು ಮುಖ್ಯಮಂತ್ರಿಯವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಘಗಳ ರಚನೆಯ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಬಹಳ ವರ್ಷಗಳಿಂದ ಸಕ್ರಿಯವಾಗಿವೆ. ಆದರೆ ಯುವಕರಿಗಾಗಿ ಮೊದಲ ಬಾರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಇಂತಹ ಯೋಜನೆಯನ್ನು ರೂಪಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು […]