ಬೆಂಗಳೂರು,ಜು.1- ಜಮೀನಿನ ಖಾತೆ ಮಾಡಿಕೊಡಲು ಲಂಚ ಪಡೆಯುವಾಗ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಡಿ.ಎ.ದಿವಾಕರ್ ಅವರನ್ನು ವಶಕ್ಕೆ ಪಡೆದಿರುವ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ನೆಲಮಂಗಲ ತಾಲ್ಲೂಕು ಗಿರಿಯನಪಾಳ್ಯದಲ್ಲಿ 8.20 ಎಕರೆ ಜಮೀನು ನ್ಯಾಯಾಲಯದ ಆದೇಶದಂತೆ ನೋಂದಣಿ ಮಾಡಿ ಖಾತೆ ಮಾಡಿಕೊಡಲು 2 ಲಕ್ಷ ಲಂಚದ ಬೇಡಿಕೆ ಇಡಲಾಗಿತ್ತು.
ನಂತರ 1.5 ಲಕ್ಷ ರೂಗೆ ಮಾತುಕತೆ ನಡೆದು ದೊಡ್ಡಬಳ್ಳಾಪುರದ ಶ್ರೀನಿಧಿ ಮೈಭವ್ ಹೋಟೆಲ್ ಬಳಿ ಕಾರಿನಲ್ಲಿ ದೂರುದಾರರಿಂದ ಹಣ ಪಡೆಯುವಾಗ ಲೋಕಾಯುಕ್ತ ಇನ್‌ಸ್ಪೆಕ್ಟರ್ ರಮೇಶ್ ಮತ್ತಿತರರ ತಂಡ ರೆಡ್‌ಹ್ಯಾಂಡ್ ಆಗಿ ಗ್ರೇಡ್-2 ತಹಸೀಲ್ದಾರ್ ಡಿ.ದಿವಾಕರ್ ಸಿಕ್ಕಿಬಿದ್ದಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ