ನನ್ನ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳಿ: ಲಾಲೂ ಪುತ್ರಿಯ ಭಾವನಾತ್ಮಕ ಟ್ವಿಟ್

Social Share

ಸಿಂಗಾಪುರ್,ಫೆ.11- ಮೂತ್ರಪಿಂಡ ಶಸ್ತ್ರ ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ನನ್ನ ತಂದೆ ಲಾಲೂ ಪ್ರಸಾದ್ ಯಾದವ್ ಅವರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ ನೀವೆಲ್ಲಾ ನಮ್ಮ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತೀರಾ ಎಂದು ಭಾವಿಸಿದ್ದೇನೆ ಎಂದು ಲಾಲೂ ಅವರಿಗೆ ಕಿಡ್ನಿ ದಾನ ಮಾಡಿರುವ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಭಾವನಾತ್ಮಕ ಟ್ವಿಟ್ ಮಾಡಿ ಗಮನ ಸೆಳೆದಿದ್ದಾರೆ.

ಒಂದು ಮುಖ್ಯವಾದ ವಿಷಯ ಹೇಳಬೇಕು. ಈ ಪ್ರಮುಖ ವಿಷಯ ನಮ್ಮ ನಾಯಕ ಲಾಲು ಜಿ ಅವರ ಆರೋಗ್ಯದ ಬಗ್ಗೆ. ಪಾಪ ಇಂದು ಅವರು ಸಿಂಗಾಪುರದಿಂದ ಭಾರತಕ್ಕೆ ಹೋಗುತ್ತಿದ್ದಾರೆ. ನಾನು ಮಗಳಾಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನನ್ನ ತಂದೆಯನ್ನು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ನಾನು ಅವರನ್ನು ಕಳುಹಿಸುತ್ತಿದ್ದೇನೆ. ನಿಮ್ಮೆಲ್ಲರ ನಡುವೆ ಈಗ ನೀವೆಲ್ಲರೂ ನನ್ನ ತಂದೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತೀರಿ ಎಂಬ ವಿಶ್ವಾಸವಿದೆ ಎಂದು ರೋಹಿಣಿ ಆಚಾರ್ಯ ಟ್ವೀಟ್ ಮಾಡಿದ್ದಾರೆ.

ಮುಂಬೈನಲ್ಲಿ 2 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

ಲಾಲು ಯಾದವ್ ಅವರು ಕಳೆದ ವರ್ಷ ಡಿಸೆಂಬರ್‍ನಲ್ಲಿ ಸಿಂಗಾಪುರದ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಅವರ ಶಸ್ತ್ರಚಿಕಿತ್ಸೆಯ ನಂತರ, ಲಾಲು ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಟ್ವೀಟ್ ಮಾಡಿದ್ದರು: ನನ್ನ ತಂದೆಯ ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ, ಅವರನ್ನು ಆಪರೇಷನ್ ಥಿಯೇಟರ್‍ನಿಂದ ಐಸಿಯುಗೆ ಸ್ಥಳಾಂತರಿಸಲಾಗಿದೆ ಕಿಡ್ನಿ ದಾನಿ ಅಕ್ಕ ರೋಹಿಣಿ ಆಚಾರ್ಯ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಇಬ್ಬರೂ. ಆರೋಗ್ಯಕ ವಾಗಿದ್ದಾರೆ ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದರು.

ಕುಟುಂಬದಿಂದ ಯಾರಾದರೂ ನನ್ನ ತಂದೆಗೆ ಮೂತ್ರಪಿಂಡವನ್ನು ದಾನ ಮಾಡಬೇಕೆಂದು ವೈದ್ಯರು ಬಯಸಿದ್ದರು. ನನ್ನ ಸಹೋದರಿ ರೋಹಿಣಿ ಅವರ ಕಿಡ್ನಿ ಅತ್ಯುತ್ತಮವಾಗಿ ಹೊಂದಿಕೆಯಾಯಿತು, ಆದ್ದರಿಂದ ನಾವು ಅದನ್ನು ಮುಂದುವರಿಸಿದ್ದೇವೆ ಎಂದು ತೇಜಸ್ವಿ ಪಾಟ್ನಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

74 ವರ್ಷದ ಲಾಲು ಅವರು ಕೆಲವು ಸಮಯದಿಂದ ತೀವ್ರ ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದರು ಮತ್ತು ವೈದ್ಯರು ಅವರಿಗೆ ಮೂತ್ರಪಿಂಡ ಕಸಿ ಮಾಡಲು ಸಲಹೆ ನೀಡಿದ್ದರು.

ಬಿಬಿಎಂಪಿಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ

ಅವರ ಮಗಳು ರೋಹಿಣಿ ಕಿಡ್ನಿ ದಾನಿಯಾಗಲು ಮುಂದೆ ಬಂದರು. ಆಕೆಯ ಒತ್ತಾಯದ ನಂತರ, ಕುಟುಂಬವು ಶಸ್ತ್ರಚಿಕಿತ್ಸೆಗಾಗಿ ಸಿಂಗಾಪುರವನ್ನು ಆಯ್ಕೆ ಮಾಡಿತು. ರೋಹಿಣಿ ಆಚಾರ್ಯ ಅವರು ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ರಾವ್ ಸಮರೇಶ್ ಸಿಂಗ್ ಅವರನ್ನು ಮದುವೆಯಾಗಿದ್ದಾರೆ ಮತ್ತು ಸಿಂಗಾಪುರದಲ್ಲಿ ವಾಸಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.

Take Care, My Papa, Lalu Yadav, Daughter, Emotional, Post,

Articles You Might Like

Share This Article