ಬೆಂಗಳೂರು,ಫೆ.11-ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಸಲು ನಾವು ಪ್ರಸ್ತಾವನೆಯನ್ನು ಕಳುಹಿಸಿದ್ದೆವು. ಕ್ಷೇತ್ರ ವಿಂಗಡಣೆ, ಮೀಸಲಾತಿ ಬಗ್ಗೆ ಮಸೂದೆಯನ್ನು ತರಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿನಾರಾಯಣ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಎಸ್ಸಿ-ಎಸ್ಟಿಗೆ ಮಾತ್ರ ಮೀಸಲಾತಿ ಮಾತ್ರ ನೀಡಬೇಕಾಗಿದೆ ಎಂದು ಹೇಳಿದರು.ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಕೊಡುವಂತಿಲ್ಲ. ಹೀಗಾಗಿ ಸಾಮಾಣ್ಯ ವರ್ಗದಲ್ಲೇ ಒಬಿಸಿ ಬರುತ್ತವೆ. ಈ ಕುರಿತಂತೆ ಪ್ರತಿಪಕ್ಷಗಳು ಮಾತನಾಡಲಿ. ನಾವು ಕಾನೂನು ಬದ್ದವಾಗಿ ಚುನಾವಣೆ ನಡೆಸಬೇಕೆಂಬ ಅಪೇಕ್ಷೆ ಹೊಂದಿದ್ದೇವೆ ಎಂದು ಹೇಳಿದರು.
ಈ ಎಲ್ಲ ಕಾರಣದಿಂದ ಜಿಪಂ, ತಾಪಂ ಚುನಾವಣೆ ಮುಂದಕ್ಕೆ ಹೋಗಿದೆ. ಸುಪ್ರೀಂಕೋರ್ಟ್ ತೀರ್ಪು ಕುರಿತಂತೆ ಪರಿಣಿತರ ಜೊತೆ ಚರ್ಚಿಸಬೇಕು. ಹೀಗಾಗಿ ಸದ್ಯಕ್ಕೆ ಚುನಾವಣೆ ನಡೆಯುತ್ತಿಲ್ಲ ಎಂದರು.ಪರಿಸ್ಥಿತಿ ಶಾಂತವಾಗಿರುವುದ ರಿಂದ ರಾಷ್ಟ್ರ ಧ್ವಜದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಏನು ಉತ್ತರ ಕೊಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
