ತಮಿಳುನಾಡು-ಪುದುಚೇರಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Social Share

ಚೆನ್ನೈ, ಡಿ.25- ವಾಯುಭಾರ ಕುಸಿತದಿಂದಾಗಿ ನೆರೆಯ ತಮಿಳಿನಾಡು ಹಾಗೂ ಪುದುಚೇರಿಯ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ. ಚೆನ್ನೈ, ಕಾಂಚಿಪುರಂ, ಮೈಲಾಡು ತೊರೈ, ನಾಗಪಟ್ಟಣಂ, ತಂಜಾವೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನಿಂದ ಕೂಡಿದ ಭಾರೀ ಮಳೆಯಾಗಿದೆ.

ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮಳೆಯಾಗುವ ಸಾಧ್ಯತೆ ಯಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.

ಶಾಲಾ ಆವರಣದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಐವರು ಶಿಕ್ಷಕರು ಸಸ್ಪೆಂಡ್

ಈಗಾಗಲೇ ಹಲವು ಕಡೆ ಭಾರೀ ಮಳೆಯಾಗುತ್ತಿರುವ ಕಾರಣ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ನೆರೆಯ ಆಂಧ್ರ, ಪುದುಚೇರಿಯಲ್ಲೂ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮೋಡ ಮುಸುಕಿದ ವಾತಾವರಣ, ಮಳೆ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tamil Nadu, Puducherry, Heavy rain,

Articles You Might Like

Share This Article