Saturday, April 27, 2024
Homeರಾಷ್ಟ್ರೀಯಭಾರಿ ಮಳೆಗೆ ತತ್ತರಿಸಿದ ಚೆನ್ನೈ, ಪುದುಚೇರಿ

ಭಾರಿ ಮಳೆಗೆ ತತ್ತರಿಸಿದ ಚೆನ್ನೈ, ಪುದುಚೇರಿ

ಚೆನ್ನೈ, ಜ 8 (ಪಿಟಿಐ) – ಪುದುಚೇರಿ ಹಾಗೂ ತಮಿಳುನಾಡಿನ ಕೆಲವು ಭಾಗಗಳಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚೆನ್ನೈ ಮತ್ತು ನೆರೆಯ ಚೆಂಗಲ್ಪಟ್ಟು ಮತ್ತು ಕಾಂಚೀಪುರಂ, ಜೊತೆಗೆ ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವಾರೂರ್ ಭಾಗದಲ್ಲಿ ಭಾರಿ ಮಳೆಯಾಗಿದೆ. ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು ಮತ್ತು ಕಲ್ಲಕುರಿಚಿ ಸೇರಿದಂತೆ ಜಿಲ್ಲೆಗಳಲ್ಲಿ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ನಾಗಪಟ್ಟಣಂ ಜಿಲ್ಲಾಡಳಿತವು ನಾಗಪಟ್ಟಣಂ ಮತ್ತು ಕೀಲ್ವೇಲೂರ್ ವೃತ್ತಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ನಿನ್ನೆ ಬೆಳಿಗ್ಗೆ 8.30ರಿಂದ ಇಂದು ಮುಂಜಾನೆ 5.30ರ ಅವಧಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ 167 ಮಿ.ಮೀ ಮಳೆಯಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಈ ಅವಯಲ್ಲಿ ಕಾರೈಕ್ಕಲ್ (ಪುದುಚೇರಿ ಯುಟಿ) 122 ಮಿ.ಮೀ.ಪುದುಚೇರಿ, ಜನವರಿ 8 (ಪಿಟಿಐ) ಕಳೆದ 24 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಪುದುಚೇರಿಯಲ್ಲಿ ಸಹಜ ಜೀವನ ಅಸ್ತವ್ಯಸ್ತಗೊಂಡಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಮೂಲದ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಆತಂಕಕಾರಿ: ಲೀ

ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎನ.ರಂಗಸಾಮಿ ಘೋಷಿಸಿದ್ದಾರೆ. ಏತನ್ಮಧ್ಯೆ, ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪೂರ್ವ ವಾಯುಭಾರ ಕುಸಿತದಿಂದಾಗಿ ಭಾರೀ ಮಳೆಯಾಗುತ್ತಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಲಿಲ್ಲ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಕೇಂದ್ರಾಡಳಿತ ಪ್ರದೇಶದ ಹಲವು ಭಾಗಗಳಲ್ಲಿ ಬೆಳೆದ ಬೆಳೆ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Latest News