Saturday, April 27, 2024
Homeರಾಷ್ಟ್ರೀಯತಮಿಳುನಾಡಿನಲ್ಲಿ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚನ್ನೈ,ಡಿ.18-ನೆರೆಯ ತಮಿಳುನಾಡಿನ ಹಲವು ಕಡೆ ಎಡೆಬಿಡದೆ ನಿರಂತವಾಗಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ, ವಿರುದುನಗರ ಮತ್ತು ತೆಂಕಶಿ ಜಿಲ್ಲೆಗಳ ಎಲ್ಲಾ ಶಾಲಾಕಾಲೇಜುಗಳು, ಖಾಸಗಿ ಸಂಸ್ಥೆಗಳು, ಬ್ಯಾಂಕ್‍ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಹಲವು ಕಡೆ ರೈಲು ಪ್ರಯಾಣವನ್ನು ಕೂಡ ರದ್ದು ಮಾಡಲಾಗಿದೆ.

ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು ಕನ್ಯಾಕುಮಾರಿಯಲ್ಲಿ 17 ಸೆಂ.ಮೀ ಮಳೆ ದಾಖಲಾಗಿದೆ. ತೂತುಕುಡಿ ಜಿಲ್ಲೆಯಲ್ಲಿ ರಾತ್ರಿಯೂ ಮಳೆ ಸುರಿದು ನಿರಂತರ ಮಳೆಯಿಂದಾಗಿ ಕೋವಿಲ್ಪಟ್ಟಿ ಪ್ರದೇಶದಲ್ಲಿ 40 ಕೆರೆಗಳು ತುಂಬಿ ಹರಿಯುತ್ತಿವೆ.

ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹಪೀಡಿತ ಜನರು ಆಶ್ರಯ ಶಿಬಿರಗಳಲ್ಲಿ ತಂಗಿದ್ದು, ತೂತುಕುಡಿ ಜಿಲ್ಲೆಯ ಶ್ರೀವೈಕುಂಟಂನಲ್ಲಿ 525 ಮಿ.ಮೀ ಮಳೆಯಾಗಿದ್ದು, ಈ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಲ್ಲದೆ, ತಿರುಚೆಂದರ್, ಸಾತಾಂಕುಳಂ, ಕಯತಾರ್, ಒಟ್ಟಾಪಿದ್ರಂ ಕೂಡ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

ತೂತುಕುಡಿಯಲ್ಲಿ ರಸ್ತೆಗಳು, ಮನೆಗಳು, ಹೊಲ ಗದ್ದೆಗಳು ಜಲಾವೃತವಾಗಿದೆ. ಮಳೆಯು ಸವಾಲಿನ ಪರಿಸ್ಥಿತಿಗಳಿಗೆ ಕಾರಣವಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಇದೆ. ಎಟ್ಟಾಯಪುರಂ, ವಿಲತ್ತಿಕುಲಂ, ಕಲುಗುಮಲೈ, ಕಯತಾರ್, ಕಡಂಬೂರ್, ವೆಂಬಾರ್, ಸುರಂಗುಡಿ ಮತ್ತು ಇತರ ಪ್ರದೇಶಗಳ ಮೇಲೆ ಪರಿಣಾಮ ಬೀರಿದೆ. ನಿರಂತರ ಮಳೆಯಿಂದಾಗಿ ಕೋವಿಲ್ಪಟ್ಟಿ ಸುತ್ತಮುತ್ತಲಿನ ನದಿಗಳು ಮತ್ತು ಕೆರೆಗಳು ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ.

ಇಂದು ತಮಿಳುನಾಡಿನ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಡಿ.19ರಂದು ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಮ ಮಂದಿರ ಉದ್ಘಾಟನೆ, ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೂತುಕುಡಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಇಂದು ತಮಿಳುನಾಡಿನ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‍ನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಂಭವಿಸುವ ಸಾಧ್ಯತೆಯಿದೆ.

ಅದೇ ರೀತಿ ತಿರುನಲ್ವೇಲಿಯಲ್ಲಿ 19 ಶಿಬಿರಗಳು, ಕನ್ಯಾಕುಮಾರಿಯಲ್ಲಿ ನಾಲ್ಕು ಶಿಬಿರಗಳು, ತೂತುಕುಡಿಯಲ್ಲಿ ಎರಡು ಶಿಬಿರಗಳು ಮತ್ತು ತೆಂಕಶಿ ಜಿಲ್ಲೆಯಲ್ಲಿ ಒಂದು ಶಿಬಿರವನ್ನು ವಿಪತ್ತಿನ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಸತಿ ಕಲ್ಪಿಸಲು ಸ್ಥಾಪಿಸಲಾಗಿದೆ. ಹವಾಮಾನ ಇಲಾಖೆಯು ತಮಿಳುನಾಡಿನ ಪೂರ್ವ ಕರಾವಳಿ ಪ್ರದೇಶಗಳು ಮತ್ತು ಮನ್ನಾರ್ ಕೊಲ್ಲಿಯಲ್ಲಿ ಚಂಡಮಾರುತದ ಗಾಳಿಯ ಬಗ್ಗೆ ಎಚ್ಚರಿಕೆ ನೀಡಿದೆ.

ಉಗ್ರರು ಅಪಹರಿಸಿದ್ದ ಯುವಕರ ರಕ್ಷಣೆ

ಸರ್ಕಾರವು ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕನ್ಯಾಕುಮಾರಿ, ತಿರುನಲ್ವೇಲಿ, ಟುಟಿಕೋರಿನ್ ಮತ್ತು ತೆಂಕಶಿ ಜಿಲ್ಲೆಗಳಲ್ಲಿ 250 ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದ್ದು, ಇನ್ನೂ ಕೆಲವು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸದಸ್ಯರು ಇಂದು ತೆಂಕಶಿ ಜಿಲ್ಲೆಗೆ ಆಗಮಿಸಲಿದ್ದಾರೆ. ನಾನು ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ ಎಂದು ತಮಿಳುನಾಡಿನ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ.

RELATED ARTICLES

Latest News