Monday, December 2, 2024
Homeರಾಜ್ಯದಸರಾ ಮಹೋತ್ಸವಕ್ಕೆ ಬರುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

ದಸರಾ ಮಹೋತ್ಸವಕ್ಕೆ ಬರುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

Tax exemption for tourist vehicles

ಬೆಂಗಳೂರು, ಅ.10-ದಸರಾ ಮಹೋತ್ಸವಕ್ಕೆ ಅಂತರ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಹಿಸುವಂತೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ.

ತೆರಿಗೆ ವಿನಾಯಿತಿಯು ಅ.4ರಿಂದ ಜಾರಿಗೆ ಬಂದಿದ್ದು, ಅ.12ರವರೆಗೆ ಜಾರಿಯಲ್ಲಿರಲಿದೆ ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ.

RELATED ARTICLES

Latest News