ಟಿಡಿಆರ್ ಅಕ್ರಮ : ನೌಕರರ ವಿರುದ್ಧ ಕಾನೂನು ಕ್ರಮ

Social Share

ಬೆಂಗಳೂರು,ಸೆ.28- ಟಿಡಿಆರ್ ಅಕ್ರಮದಲ್ಲಿ ಭಾಗಿಯಾಗಿರುವ ನಿವೃತ್ತ ಹಾಗೂ ಹಾಲಿ ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಈಗಾಗಲೇ 6 ಜನರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅದೇ ರೀತಿ ಉಳಿದವರ ಮೇಲೂ ಎಫ್‍ಐಆರ್ ದಾಖಲಿಸಿ ಕ್ರಿಮಿನಲ್ ಪ್ರಕರಣ ದಾಖಲಿ ಸಲಾಗುವುದು ಎಂದು ಅವರು ಎಚ್ಚರಿಸಿದರು.

ಟಿಡಿಆರ್ ಅಕ್ರಮದಲ್ಲಿ ಭಾಗಿಯಾಗಿ ರುವ ಕೆಲವರು ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರ ಮೇಲೆ ಎಫ್‍ಐಆರ್ ದಾಖಲಿಸಲಾಗುವುದು ಅದೇ ರೀತಿ ಸೇವೆಯಲ್ಲಿ ಮುಂದುವರೆದಿರುವ ಅಧಿಕಾರಿಗಳ ಮೇಲೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಣೆ ನೀಡಿದರು.

ನ್ಯಾಯಾಲಯ ಕೂಡ ಟಿಡಿಆರ್‍ಅಕ್ರಮದಲ್ಲಿ ಭಾಗಿಯಾಗಿರುವ ಅಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾ ಧಾನ ವ್ಯಕ್ತಪಡಿಸಿದೆ. ಹೀಗಾಗಿ ಅಕ್ರಮದಲ್ಲಿ ಭಾಗಿಯಾದವರ ಪಟ್ಟಿ ಸಿದ್ದಪಡಿಸಲಾಗಿದೆ.

ನಾವು ಸಿದ್ದಪಡಿಸಿರುವ ಆರೋಪಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೂ ಸಲ್ಲಿಸಿದ್ದೇವೆ. ಮುಂದೆ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ಹಿಂದೆ ಇದ್ದ ಟಿಡಿಆರ್‍ಯೋಜನೆಯನ್ನು ಬಿಬಿಎಂಪಿ ಹೊಸ ಕಾಯಿದೆ ಪ್ರಕಾರ ಸಿದ್ದಪಡಿಸಿ ಅದನ್ನು ಬಿಡಿಎಗೆ ಹಸ್ತಾಂತರಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಅದರಂತೆ ನಾವು ಎಲ್ಲ ಪ್ರಕ್ರಿಯೆಗಳನ್ನು ಕೈಗೊಂಡಿದ್ದೇವೆ. ಬಿಬಿಎಂಪಿ ಕಾರ್ಯ ಮುಗಿದ ಕೂಡಲೆ ಹೊಸ ಟಿಡಿಆರ್ ಯೋಜನೆಯನ್ನು ಬಿಡಿಎಗೆ ಹಸ್ತಾಂತರಿಸಲಾಗುವುದು ಎಂದರು. ಒಂದೇ ಜಾಗಕ್ಕೆ ಹಲವಾರು ಸಂಸ್ಥೆಗಳು ಟಿಡಿರ್ಆ ನೀಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಉದ್ದೇಶದಿಂದ ಟಿಡಿಆರ್ ನೀಡುವ ಅಧಿಕಾರವನ್ನು ಬಿಡಿಎಗೆ ಹಸ್ತಾಂತರಿಸಲಾಗುತ್ತಿದೆ ಎಂದು ಆಯುಕ್ತರು ಹೇಳಿದರು.

ಕೆರೆ ಹಾಗೂ ರಾಜಕಾಲುವೆ ಒತ್ತುವರಿ ತೆರವು ಕಾರ್ಯಚರಣೆ ಮುಂದುವರೆಸ ಲಾಗಿದೆ. ಕೆಲವರು ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಹೀಗಾಗಿ ಕಾನೂನು ಕೋಶದ ವಕೀಲರೊಂದಿಗೆ ಮಾತುಕತ ನಡೆಸಿ ತಡೆಯಾಜ್ಞೆ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕೆರೆ ಒತ್ತುವರಿ ತೆರವು ಕಾರ್ಯ ಪೂರ್ಣಗೊಳಿಸುವುದಾಗಿ ಅವರು ಭರವಸೆ ನೀಡಿದರು.

Articles You Might Like

Share This Article