ಬಾಲಕನ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ಅಂಗನವಾಡಿ ಶಿಕ್ಷಕಿ-ಸಹಾಯಕಿ

Social Share

ತುಮಕೂರು,ಆ.30-ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಮೂರು ವರ್ಷದ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟಿರುವ ಪ್ರಕರಣ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.

ಅಂಗನವಾಡಿಯಲ್ಲಿ ಪದೇ ಪದೇ ಮೂತ್ರ ಮತ್ತು ಶೌಚವನ್ನು ಮಾಡುತ್ತಿದ್ದ ಮೂರು ವರ್ಷದ ಬಾಲಕನನ್ನು ಬೆದರಿಸಲು, ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಬೆಂಕಿಕಡ್ಡಿ ಗೀರಿದ್ದು, ಚಡ್ಡಿ ಹಾಕದೇ ಕುಳಿತುಕೊಂಡಿದ್ದ ಬಾಲಕನ ಗುಪ್ತಾಂಗಕ್ಕೆ ತಗುಲಿ ಗಾಯವಾಗಿದ್ದು, ಮನೆಗೆ ಹೋದಾಗ ಗಮನಿಸಿದ ಅಜ್ಜಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ.

ಈ ಘಟನೆ ತಿಳಿದು ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಮಕ್ಕಳು, ಶಿಕ್ಷಕಿ, ಸಹಾಯಕಿ ಮತ್ತು ಬಾಲಕನ ಪೊೀಷಕರ ಹೇಳಿಕೆ ಪಡೆದಿದ್ದಾರೆ. ಕೇಂದ್ರದ ಶಿಕ್ಷಕಿ ಹಾಗೂ ಸಹಾಯಕಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲ್ಲೂಕು ಅಧಿಕಾರಿ ನೋಟಿಸ್ ನೀಡಿ ತಪೊ್ಪಪ್ಪಿಗೆ ಪತ್ರ ಪಡೆದಿದ್ದಾರೆ.

Articles You Might Like

Share This Article