Monday, May 6, 2024
Homeರಾಷ್ಟ್ರೀಯವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಧ್ಯಾಪಕ ಅರೆಸ್ಟ್

ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಧ್ಯಾಪಕ ಅರೆಸ್ಟ್

ಚೆನ್ನೈ, ಏ.24 (ಪಿಟಿಐ) : ಇಬ್ಬರು ಮಾಜಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 51 ವರ್ಷದ ಕಲಾಕ್ಷೇತ್ರ ಫೌಂಡೇಶನ್ ನ ಮಾಜಿ ಅಧ್ಯಾಪಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಶೀಜಿತ್ ಕೃಷ್ಣ ಎಂದು ಗುರುತಿಸಲಾಗಿದೆ.

1995-2007ರ ಅವಧಿಯಲ್ಲಿ ಕಲಾಕ್ಷೇತ್ರದ ವಿದ್ಯಾರ್ಥಿಗಳಾಗಿದ್ದಾಗ ಕೃಷ್ಣ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಇಬ್ಬರು ಮಹಿಳೆಯರ ದೂರಿನ ಮೇರೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನೀಲಂಕರೈ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ಸ್‍ಪೆಕ್ಟರ್ ನೇತೃತ್ವದ ತಂಡ ಆತನನ್ನು ಬಂಧಿಸಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

RELATED ARTICLES

Latest News