ನವದೆಹಲಿ,ಫೆ.9- ಮೂರನೆ ತರಗತಿ ಓದುತ್ತಿದ್ದ ಎಂಟು ವರ್ಷದ ವಿದ್ಯಾರ್ಥಿನಿಗೆ ಶಾಲಾ ಆವರಣದಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಪೂರ್ವ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಪೂರ್ವ ದೆಹಲಿಯ ನ್ಯೂ ಅಶೋಕ್‍ನಗರದ ಸರ್ಕಾರಿ ಶಾಲೆಯಲ್ಲಿ ಕ್ರೀಡಾ ಶಿಕ್ಷಕನಾಗಿರುವ 40 ವರ್ಷದ ವ್ಯಕ್ತಿಯನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಎಂಟು ವರ್ಷದ ವಿದ್ಯಾರ್ಥಿನಿಗೆ ಚಾಕಲೇಟ್ ಆಮಿಷ ಒಡ್ಡಿದ ಶಿಕ್ಷಕ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ.
ಖಾಸಗಿ ಬ್ಯಾಂಕ್‍ನಲ್ಲಿ ಬೆಂಕಿ ಅವಗಡ
ಮಗುವಿನ ವರ್ತನೆಯ ಬಗ್ಗೆ ಆಕೆಯ ತಾಯಿಗೆ ಅನುಮಾನ ಬಂದು ವಿಚಾರಿಸಿದಾಗ ಆಕೆ ಶಿಕ್ಷಕನ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾಳೆ. ತಕ್ಷಣ ಎಚ್ಚೆತ್ತುಕೊಂಡ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾಮುಕ ಶಿಕ್ಷಕನನ್ನು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಕಾಮುಕ ಶಿಕ್ಷಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಇತರ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೆÇಲೀಸ್ ಅಕಾರಿ ಗುಗುಲೋತ್ ತಿಳಿಸಿದ್ದಾರೆ.
ಭಾರತ ಮಾನವೀಯತೆ ಪರ ಸದಾ ನಿಲ್ಲುತ್ತದೆ: ಜೈಶಂಕರ್
ಶಿಕ್ಷಕನ ಲೈಂಗಿಕ ದೌರ್ಜನ್ಯದಿಂದ ನಲುಗಿರುವ ಬಾಲಕಿಗೆ ಕೌನ್ಸಿಲಿಂಗ್ ನಡೆಸಿ ಅಗತ್ಯ ಔಷದೋಪಚಾರ ನಡೆಸಲಾಗಿದೆ.
Teacher, detained, sexually, assaulting, Class 3, girl, Delhi govt, school,