ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಸಿಐಡಿ ತನಿಖೆಗೆ : ಸಚಿವ ಬಿ.ಸಿ.ನಾಗೇಶ್

Social Share

ಬೆಂಗಳೂರು,ಸೆ.20- ಕಳೆದ 2015-16ರಲ್ಲಿ ಅರ್ಜಿ ಸಲ್ಲಿಸದೆ, ಪರೀಕ್ಷೆ ಬರೆಯದೆ, ಅರ್ಹತೆ ಇಲ್ಲದೆ, ಶಿಕ್ಷಕರಾಗಿ ನೇಮಕವಾಗಿದ್ದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದರು.

ಶೂನ್ಯವೇಳೆಯಲ್ಲಿ ಶಾಸಕರಾದ ಪಿ.ರಾಜೀವ್ ಹಾಗೂ ಎ.ಎಸ್.ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಸ್ಸೆಸ್ಸೆಲಿ ಮಂಡಳಿಯ ನಿರ್ದೇಶಕರಿಂದ ತನಿಖೆ ನಡೆಸಿದಾಗ ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಬೆಂಗಳೂರು ವಿಭಾಗದಲ್ಲಿ ಗೊತ್ತಾದ ನಂತರ ಸಿಐಡಿಗೆ ವಹಿಸಲಾಗಿದೆ.

ಸಿಇಟಿ ಬರೆಯದೆ, ಅರ್ಹತೆ ಬರೆಯದೆ, ಅರ್ಜಿ ಸಲ್ಲಿಸದೆ 16 ಮಂದಿ ಶಿಕ್ಷಕರಾಗಿ ನೇಮಕವಾಗಿರುವುದು ಪತ್ತೆಯಾಗಿದೆ. ಅವರನ್ನು ಬಂಸಲಾಗಿದೆ. ಈ ರೀತಿ 35ರಿಂದ 40 ಮಂದಿ ಶಿಕ್ಷಕರಾಗಿ ನೇಮಕವಾಗಿರುವ ಮಾಹಿತಿ ಇದೆ. ಬೆಂಗಳೂರು ಅಷ್ಟೇ ಅಲ್ಲ ಬೇರೆ ಬೇರೆ ವಿಭಾಗದಲ್ಲೂ ಈ ಬಗ್ಗೆ ಪರಿಶೀಲಿಸಲಾಗುತ್ತದೆ. ಸಿಐಡಿ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ : ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಇಲ್ಲ

ಇದಕ್ಕೂ ಮುನ್ನ ಮಾತನಾಡಿದ ಪಿ.ರಾಜೀವ್, ಸಿಇಟಿ ಪರೀಕ್ಷೆ ಬರೆಯದೆ ಶಿಕ್ಷಕರಾಗಿ ಹೇಗೆ ನೇಮಕವಾದರು ಎಂಬುದರ ಬಗ್ಗೆ ತನಿಖೆಯಾಗಬೇಕು ಎಂದರು. ಇದಕ್ಕೆ ದನಿಗೂಡಿಸಿದ ಎ.ಎಸ್.ನಡಹಳ್ಳಿ, ಇದನ್ನು ಬಗೆದರೆ ದೊಡ್ಡ ವಿಚಾರವಿದೆ. ಇದು ದೊಡ್ಡ ಹಗರಣ. ತಪ್ಪಿತಸ್ಥರು ಯಾರು ಎಂಬುದು ಬಯಲಾಗಬೇಕು ಎಂದು ಆಗ್ರಹಿಸಿದರು.

ಸಚಿವರ ಉತ್ತರದ ನಂತರವೂ ಆಗ್ರಹ ಮುಂದುವರೆದಾಗ ಕಾನೂನು ಸಚಿವ ಮಾಧುಸ್ವಾಮಿ ಮಧ್ಯಪ್ರವೇಶಿಸಿ, ದಾಖಲೆ ಇದ್ದರೆ ಕೊಡಲಿ ಅದನ್ನು ಸೇರಿಸಿ ತನಿಖೆ ಮಾಡುವುದಾಗಿ ಹೇಳಿದರು.

Articles You Might Like

Share This Article