ಬೆಳಗಾವಿ,ಡಿ.6-ರಾಜ್ಯ ವ್ಯಾಪಿ ಮದರಸಾ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಗಣಿತ, ವಿಜ್ಞಾನ ಹಾಗೂ ಸಮಾಜ ಶಾಸ್ತ್ರವನ್ನು ಬೋಧಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಪರವಾಗಿ ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮದರಸಾ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಿಗೆ ಧಾರ್ಮಿಕ ಬೋಧನೆ ಮಾತ್ರವಲ್ಲದೆ ಸಾಮಾಜಿಕ ಬದುಕು ಕಟ್ಟಿಕೊಳ್ಳುವ ಇತರೆ ವಿಷಯಗಳ ಕುರಿತು ಬೋದನೆ ಮಾಡಲಾಗುವುದು ಎಂದರು.
ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..?
ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನೋಂದಾಯಿತ ವಕ್ ಆಸ್ತಿಗಳಲ್ಲಿ ಹಾಗೂ ವಕ್ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ 2 ವರ್ಷಗಳು ಕನ್ನಡ, ಇಂಗ್ಲೀಷ್, ವಿಜಾ್ಞನ, ಗಣಿತ ಹಾಗೂ ಇತರೆ ವಿಷಯಗಳ ಬಗ್ಗೆ ಸತತವಾಗಿ ಬೋಸಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ ಮತ್ತು ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.