Monday, December 23, 2024
Homeಬೆಂಗಳೂರುಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಮೂಲಕ ಟೆಕ್ಕಿಗೆ 11 ಕೋಟಿ ರೂ. ವಂಚನೆ

ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಮೂಲಕ ಟೆಕ್ಕಿಗೆ 11 ಕೋಟಿ ರೂ. ವಂಚನೆ

Techie cheated out of Rs 11 crore through digital arrest in Bengaluru

ಬೆಂಗಳೂರು,ಡಿ.23- ಡಿಜಿಟಲ್ ಅರೆಸ್ಟ್ ಮೂಲಕ ನಗರದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರಿಗೆ 11 ಕೋಟಿ ರೂ. ವಂಚಿಸಿರುವ ಪ್ರಕರಣದ ತನಿಖೆ ಕೈಗೊಂಡಿರುವ ಈಶಾನ್ಯ ವಿಭಾಗದ ಸೆನ್ ಠಾಣೆಯ ಪೊಲೀಸರು ಎರಡು ತಂಡಗಳನ್ನು ರಚಿಸಿದ್ದಾರೆ.

ಒಂದು ತಂಡ ಗುಜರಾತಿಗೆ, ಮತ್ತೊಂದು ತಂಡ ಮಹಾರಾಷ್ಟ್ರಕ್ಕೆ ತೆರಳಿದ್ದು, ಸೈಬರ್ ವಂಚಕರಿಗಾಗಿ ಪತ್ತೆ ಕಾರ್ಯದಲ್ಲಿ ತೊಡಗಿವೆ.ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿರುವುದನ್ನು ಸೈಬರ್ ವಂಚಕರು ಟಾರ್ಗೆಟ್ ಮಾಡಿಕೊಂಡು ಸಾಫ್‌್ಟವೇರ್ ಎಂಜಿನಿಯರ್ ವಿಜಯಕುಮಾರ್ಗೆ 11 ಕೋಟಿ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ನಗರದ ಸಾಫ್ಟ್ ವೇರ್ ಎಂಜಿನಿಯರ್ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್ ಮಾಡಿದ ಸೈಬರ್ ವಂಚಕರು ಅವರನ್ನು ಡಿಜಿಟಲ್ ಅರೆಸ್ಟ್ ಮೂಲಕ ತಮ ಬಲೆಗೆ ಬೀಳಿಸಿಕೊಂಡು ಬರೋಬ್ಬರಿ 11.83 ಕೋಟಿ ರೂ. ಗಳನ್ನು ತಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ.

ಈ ಸಾಫ್‌್ಟವೇರ್ ಎಂಜಿನಿಯರ್ಗೆ ಕರೆ ಮಾಡಿ ತಾವು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರೆಂದು ಪರಿಚಯಿಸಿಕೊಂಡ ವಂಚಕರು ನಿಮ ಮೇಲೆ ಮುಂಬೈನ ಕೊಲಾಬಾದಲ್ಲಿ ಪ್ರಕರಣ ದಾಖಲಾಗಿದ್ದು, ನಿಮ ಆಧಾರ್ಕಾರ್ಡ್ ಬಳಸಿಕೊಂಡು 6 ಕೋಟಿ ರೂ. ವರ್ಗಾವಣೆಯಾಗಿದೆ. ಈ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ ಎಂದು ಹೆದರಿಸಿದ್ದಾರೆ.
ನಂತರ ವಂಚಕರು ಮತ್ತೆ ವಿಡಿಯೋ ಕಾಲ್ ಮಾಡಿ ನಿಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ. ನೀವು ಒಂದು ತಿಂಗಳು ಮನೆಯಲ್ಲಿರುವಂತೆ ಹೇಳಿದಾಗ ಅವರು ಯಲಹಂಕದ ಲಾಡ್‌್ಜ ವೊಂದರಲ್ಲಿ ಉಳಿದುಕೊಂಡಿದ್ದರು.

ತದನಂತರ ನಾವು ಐಟಿ-ಇಡಿ ಅಧಿಕಾರಿಗಳು ಎಂದು ಹೆದರಿಸಿ ಹಣಕ್ಕೆ ಬೇಡಿಕೆ ಇಟ್ಟು ಆನ್ಲೈನ್ ಬ್ಯಾಂಕಿಂಗ್ ಸೇರಿದಂತೆ ಹಲವು ಮಾರ್ಗಗಳ ಮುಖಾಂತರ ಹಣವನ್ನು ಕೋಟಿಗಳ ಲೆಕ್ಕದಲ್ಲಿ ಸುಲಿಗೆ ಮಾಡಿರುವುದು ಬೆಳಕಿಗೆ ಬಂದಿದೆ.

RELATED ARTICLES

Latest News