ಬೆಂಗಳೂರು,ಅ.12- ಇತ್ತೀಚೆಗೆ ಆರಂಭಗೊಂಡ ನಮ ಮೆಟ್ರೋದ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಯವಾಗಿದೆ. ಹಳದಿ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಪ್ರತಿ 25 ನಿಮಿಷದ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.
ಆರ್‌ವಿ ಕಾಲೇಜ್ ರಸ್ತೆಯಿಂದ ಬೊಮಸಂದ್ರದ ವರೆಗೆ ಸಾಗುವ 19.15 ಕಿಮೀ. ಉದ್ದದ ಹಳದಿ ಮಾರ್ಗಕ್ಕೆ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರಮೋದಿಯವರು ಚಾಲನೆ ನೀಡಿದ್ದರು. ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿದ್ದು, 3 ಮೆಟ್ರೋ ಲೈನ್‌ಗೆ ಸಂಪರ್ಕ ಕಲ್ಪಿಸುತ್ತದೆ.
ಒಟ್ಟು 4 ರೈಲುಗಳು ಪ್ರಸ್ತುತ ಸಂಚಾರ ನಡೆಸುತ್ತಿದ್ದು, ಶೀಘ್ರವೇ 5 ನೇ ರೈಲು ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ತುಸು ಅಡಚಣೆಯಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.