ಹೈದ್ರಾಬಾದ್,ಜ.26- ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಗುರುವಾರ ಹೈದರಾಬಾದ್ನ ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಗಮನ ಸೆಳೆದಿದ್ದಾರೆ.
ರಾವ್ ಅವರ ಅನುಪಸ್ಥಿತಿಯಲ್ಲಿ ತೆಲಂಗಾಣ ರಾಜ್ಯಪಾಲರಾದ ತಮಿಳ್ ಸಾಯಿ ಸೌಂದರರಾಜನ್ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ರಾಷ್ಟ್ರಗೀತೆಯೊಂದಿಗೆ ಧ್ವಜಾರೋಹಣ ನಡೆಯಿತು.
ಇದೇ ಸಂದರ್ಭದಲ್ಲಿ ರಾಜ್ಯಪಾಲರು ಗೋಲ್ಡನ್ ಗ್ಲೋಬ್ ಪ್ರಶಸ್ತಿ ವಿಜೇತ ಹಾಗೂ ಆಸ್ಕರ್ಗೆ ನಾಮನಿರ್ದೇಶನಗೊಂಡಿರುವ ನಾಟು ನಾಟು ಹಾಡಿನ ಸಂಯೋಜಕ ಎಂ ಎಂ ಕೀರವಾಣಿ ಹಾಗೂ ಗೀತರಚನೆಕಾರ ಚಂದ್ರಬೋಸ್ ಅವರನ್ನು ಸನ್ಮಾನಿಸಿದರು.
ಖೋಟಾ ನೋಟು ಮುದ್ರಣ-ಮಾರಾಟ : ನಾಲ್ವರು ಅಂತರರಾಜ್ಯ ಆರೋಪಿಗಳ ಸೆರೆ
ಸಂಗೀತ ಸಂಯೋಜಕರಾಗಿರುವ ಕೀರವಾಣಿ ಅವರಿಗೆ ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
Telangana, CM KCR, skips, Republic Day, celebrations Raj Bhavan, Hyderabad,