Saturday, April 27, 2024
Homeರಾಷ್ಟ್ರೀಯತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ರಾಜೀನಾಮೆ

ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್,ಮಾ.18- ತೆಲಂಗಾಣದ ರಾಜ್ಯಪಾಲರಾಗಿದ್ದ ತಮಿಳುಸಾಯಿ ಸೌಂದರರಾಜನ್ ಅವರು ತಮ್ಮ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಿದ್ದಾರೆ. ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಅವರು, ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ವೈಯಕ್ತಿಕ ಕಾರಣಗಳಿಂದ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯಮಾಡಿ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಅವರು ಮನವಿಯಲ್ಲಿ ಕೋರಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರು ಲೋಕಸಭೆ ಚುನಾವಣೆಗೆ ತಮಿಳುನಾಡಿನ ಯಾವುದಾ ದರೊಂದು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಂಭವವಿದೆ.
ಈ ಹಿಂದೆ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣೆಗೆ ಸಜ್ಜಾಗಬೇಕೆಂದು ಪಕ್ಷದ ವರಿಷ್ಠರೇ ಸೂಚನೆ ನೀಡಿದ್ದರು ಎಂದು ತಿಳಿದುಬದಿದೆ.

ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು AI ಮೊರೆ ಹೋದ ಬಿಜೆಪಿ

ಪುದುಚೇರಿಯಲ್ಲಿ ಎನ್‍ಆರ್ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ರ್ಪಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೆಲವು ದಿನಗಳ ಹಿಂದೆ ತಮಿಳುಸಾಯಿ ಸೌಂದರರಾಜನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ರ್ಪಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು.

ಲೋಕಸಭೆ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಸೌಂದರರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದ್ದು,ಅವರು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ರ್ಪಧಿಸಬಹುದು ಎಂದು ಮೂಲಗಳು ತಿಳಿಸಿವೆ.

RELATED ARTICLES

Latest News