Monday, November 25, 2024
Homeಇದೀಗ ಬಂದ ಸುದ್ದಿಬೆಂಗಳೂರಲ್ಲಿ ಕಳೆದ 15 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲೆ

ಬೆಂಗಳೂರಲ್ಲಿ ಕಳೆದ 15 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲೆ

ಬೆಂಗಳೂರು,ಮಾ.31-ರಾಜಧಾನಿ ಬೆಂಗಳೂರು ನಗರದಲ್ಲಿ ಸೂರ್ಯನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ತಲುಪುತ್ತಿದ್ದು,ರಾಯಚೂರು ಜಿಲ್ಲೆಯಲ್ಲಿ ಅತ್ಯಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿ ಮಧ್ಯಾಹ್ನ ಹೊತ್ತು ಜನರು ಹೈರಾಣರಾಗಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಇದು ಕಳೆದ 15 ವರ್ಷಗಳಲ್ಲೇ ದಾಖಲೆಯ ತಾಪಮಾನ ಏರಿಕೆ ,ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚು ದಾಖಲಾಗಿದೆ.ಇ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಎಲ್ಲೂ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ದಿನದಲ್ಲಿ ಕರ್ನಾಟಕದ ಒಳನಾಡಿನಾದ್ಯಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಲಿದೆ ಮತ್ತು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಹವೆ ಎಚ್ಚರಿಕೆ ಸಹ ನೀಡಲಾಗಿದೆ ಎಂದು ಹವಾಮಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಬಿಸಿಲಿನ ವೇಳೆ ಹೊಗೆ ಹೆಚ್ಚು ಓಡಾಡಬೇಡಿ ಎಂದು ಸಲಹೆ ನೀಡಿದ್ದಾರೆ. ಮುಂದಿನ ಮಾ. 22, 1931 ರಂದು ಬೆಂಗಳೂರಿನ ಸಾರ್ವಕಾಲಿಕ ದಾಖಲೆ 38.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.

RELATED ARTICLES

Latest News