ಬೆಂಗಳೂರು, ನ.3- ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಯೋಜನೆಯಾದ ಟನಲ್ ರಸ್ತೆ ನಿರ್ಮಾಣ ಯೋಜನೆಗೆ ಗ್ರಹಣ ಬಿಟ್ಟಂತೆ ಕಾಣುತ್ತಿಲ್ಲ.ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಕರೆದಿದ್ದ ಟೆಂಡರ್ ಸಲ್ಲಿಕೆ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ.
ಈಗಾಗಲೇ ಎರಡು ಬಾರಿ ಟೆಂಡರ್ ಕರೆದಿದ್ದರೂ ಯಾವೊಬ್ಬ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗಿಯಾಗದ ಹಿನ್ನೆಲೆಯಲ್ಲಿ ಮತ್ತೆ ಗುತ್ತಿಗೆ ಅವಧಿಯನ್ನು ನ.11 ರವರೆಗೆ ವಿಸ್ತರಣೆ ಮಾಡಲಾಗಿದೆ.
ಎರಡು ಪ್ಯಾಕೇಜ್ ಗಳಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ನಗರದ ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ ಜಂಕ್ಷನ್ ವರೆಗಿನ ಸುಮಾರು 17 ಕಿ.ಮೀಟರ್ ಉದ್ದದ ಟನಲ್ ರಸ್ತೆ ್ತಯನ್ನು 8770 ಕೋಟಿ ರೂ. ವೆಚ್ಚದಲ್ಲಿ ಮೊದಲನೆ ಹಂತದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.
ಅದೇ ರೀತಿ ಎರಡನೇ ಪ್ಯಾಕೇಜ್‌ನಲ್ಲಿ ರೇಸ್ ಕೋರ್ಸ್ ಜಂಕ್ಷನ್ ನಿಂದ ಸಿಲ್‌್ಕ ಬೋರ್ಡ ಜಂಕ್ಷನ್ ವರೆಗೆ ಸುಮಾರು 8.8 ಕಿ.ಮೀಟರ್ ಉದ್ದ ರಸ್ತೆಯನ್ನು ಅಂದಾಜು 8928 ಕೋಟಿ ವೆಚ್ಚದಲ್ಲಿ ಮೂರು ಪಥದ ಸುರಂಗ ರಸ್ತೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಎರಡು ಪ್ಯಾಕೇಜ್‌ಗಳಿಗೂ 50 ತಿಂಗಳ ಕಾಲಾವಧಿ ನೀಡಲಾಗಿದೆ. ಸದ್ಯ ಟೆಂಡರ್ ಅವಧಿ ವಿಸ್ತರಣೆ ಗೆ ಗುತ್ತಿಗೆದಾರರು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಗುತ್ತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಟನಲ್ ರಸ್ತೆ ನಿರ್ಮಾಣಕ್ಕೆ ಪರ-ವಿರೋಧ ವ್ಯಕ್ತವಾಗಿರುವುದರಿಂದ ಸದ್ಯ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಯಾವುದೇ ಗುತ್ತಿಗೆದಾರರು ಆಸಕ್ತಿ ತೋರುತ್ತಿಲ್ಲ.
